ವಿ.ಕೆ. ಶಶಿಕಲಾ ಸ್ಥಳಾಂತರ: ಪಿಐಎಲ್ ಅರ್ಜಿಯನ್ನು ವಜಾಗೊಳಿಸಿದ ಹೈಕೋರ್ಟ್

ಸೋಮವಾರ, 3 ಏಪ್ರಿಲ್ 2017 (19:14 IST)
ಆಕ್ರಮ ಆಸ್ತಿ ಗಳಿಕೆಯಲ್ಲಿ ಜೈಲು ಶಿಕ್ಷೆಗೆ ಗುರಿಯಾಗಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ವಿ.ಶಶಿಕಲಾ ಅವರನ್ನು ತುಮಕೂರಿಗೆ ವರ್ಗಾಯಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.  
 
ತಮಿಳುನಾಡು ಮೂಲದ ಟ್ರಾಫಿಕ್ ರಾಮಸ್ವಾಮಿ ಎನ್ನುವವರು ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿ ಶಶಿಕಲಾ ಬೆಂಗಳೂರಿನಲ್ಲಿರುವದರಿಂದ ತೊಂದರೆಯಾಗಲಿದೆ. ಕೂಡಲೇ ಅವರನ್ನು ತುಮಕೂರಿನ ಮಹಿಳಾ ಜೈಲಿಗೆ ವರ್ಗಾಯಿಸಬೇಕು ಎಂದು ಕೋರಿದ್ದರು.
 
ರಾಮಸ್ವಾಮಿ ಅರ್ಜಿಯನ್ನು ವಜಾಗೊಳಿಸಿದ ಕೋರ್ಟ್ ಕೈದಿಗಳ ಸ್ಥಳಾಂತರದ ಬಗ್ಗೆ ಹೈಕೋರ್ಟ್ ಆದೇಶ ನೀಡುವಂತಿಲ್ಲ. ರಾಜ್ಯ ಸರಕಾರ ನಿರ್ಧಾರ ತೆಗೆದುಕೊಳ್ಳಬೇಕಾಗುತ್ತದೆ ಎಂದು ಪಿಐಎಲ್ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
 
ಅಕ್ರಮ ಆಸ್ತಿ ಪ್ರಕರಣದಲ್ಲಿ ದಿವಂಗತ ಮಾಜಿ ಸಿಎಂ ಜಯಲಲಿತಾ, ವಿ.ಕೆ.ಶಶಿಕಲಾ, ನಟರಾಜನ್ ತಪ್ಪಿತಸ್ಥರು ಎಂದು ಸುಪ್ರೀಂಕೋರ್ಟ್ ತೀರ್ಪು ನೀಡಿದ್ದರಿಂದ ನಾಲ್ಕು ವರ್ಷಗಳ ಕಾಲ ಜೈಲು ಶಿಕ್ಷೆಗೆ ಗುರಿಯಾಗಿದ್ದಾರೆ.

 ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ