ಬೆಂಗಳೂರು : ರಾಜ್ಯದ ಸರ್ಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಬ್ ನಿಷೇಧ ಮುಂದುವರಿಯಲಿದೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ.
ಹಿಜಬ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಆದೇಶ ಕುರಿತು ಇಂದು ಸುಪ್ರೀಂ ಕೋರ್ಟ್ ದ್ವಿಸದಸ್ಯ ಪೀಠ ಭಿನ್ನ ತೀರ್ಪು ನೀಡಿತು.
ಈ ಕುರಿತು ಪ್ರತಿಕ್ರಿಯೆ ನೀಡಿದ ಸಚಿವರು, ಸುಪ್ರೀಂ ಕೋರ್ಟ್ ತೀರ್ಪನ್ನು ನಾವು ಸ್ವಾಗತಿಸುತ್ತೇವೆ. ವಿಶ್ವದಾದ್ಯಂತ ಹಿಜಬ್, ಬುರ್ಕಾ ಧರಿಸುವುದನ್ನು ವಿರೋಧಿಸಿ ಮಹಿಳೆಯರು ಪ್ರತಿಭಟನೆ ನಡೆಸುತ್ತಿರುವ ಸಂದರ್ಭದಲ್ಲಿ ನಾವು ನ್ಯಾಯಾಲಯದಿಂದ ಉತ್ತಮ ತೀರ್ಪು ನಿರೀಕ್ಷಿಸಿದ್ದೆವು.
ಸುಪ್ರೀಂ ಕೋರ್ಟ್ನಿಂದ ಭಿನ್ನ ತೀರ್ಪು ಬಂದಿರುವ ಕಾರಣ, ಕರ್ನಾಟಕ ಹೈಕೋರ್ಟ್ ಆದೇಶವು ಯಥಾಸ್ಥಿತಿ ಮುಂದುವರಿಯಲಿದೆ. ಹೀಗಾಗಿ ರಾಜ್ಯದ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿಷೇಧವೂ ಮುಂದುವರಿಯಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.