ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಹಿಜಾಬ್ ಹಾಗೂ ಕೇಸರಿ ಜಟಾಪಟಿಗೆ ಕರ್ನಾಟಕ ಹೈಕೋರ್ಟ್ ಬ್ರೇಕ್ ಹಾಕಿದೆ.
ಹೌದು..ತೀವ್ರ ಕುತೂಹಲ ಮೂಡಿಸಿದ್ದ ಹಿಜಾಬ್ ಸಂಘರ್ಷ ಪ್ರಕರಣ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಇಂದು (ಗುರುವಾರ) ಮಧ್ಯಂತರ ಆದೇಶ ಹೊರಡಿಸಿದ್ದು, ಅಂತಿಮ ಆದೇಶ ನೀಡುವವರೆಗೆ ಯಾವುದೇ ಧಾರ್ಮಿಕ ಉಡುಗೆಗೆ ಅವಕಾಶ ಇಲ್ಲ ಎಂದು ಆದೇಶ ನೀಡಿದೆ.
ಅಲ್ಲದೇ ತಕ್ಷಣವೇ ಶಾಲೆ-ಕಾಲೇಜು ಪ್ರಾರಂಭಿಸಿ ಎಂದು ಸರ್ಕಾರಕ್ಕೆ ಕೋರ್ಟ್ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ಅವರ ನೇತೃತ್ವದ ವಿಸ್ತೃತ ಪೀಠ ಈ ಮಧ್ಯಂತರ ಆದೇಶ ನೀಡಿದೆ. ರಾಜ್ಯದ ಎಲ್ಲ ಶಾಲಾ-ಕಾಲೇಜುಗಳು ಶೀಘ್ರ ಆರಂಭವಾಗಬೇಕು. ಮುಂದಿನ ಆದೇಶದವರೆಗೆ ಧಾರ್ಮಿಕ ಗುರುತುಗಳನ್ನು ಬಳಸುವಂತಿಲ್ಲ.
ಕೇಸರಿ ಶಾಲು ಅಥವಾ ಹಿಜಾಬ್ ಧರಿಸಿ ಶಾಲೆಗಳಿಗೆ ಹೋಗುವಂತಿಲ್ಲ ಎಂದು ನ್ಯಾಯಾಲಯವು ಮೌಖಿಕ ಆದೇಶದಲ್ಲಿ ತಿಳಿಸಿ ಪ್ರಕರಣವನ್ನು ಸೋಮವಾರಕ್ಕೆ (ಫೆ.15) ಮುಂದೂಡಿದೆ.
ಕೆಲವೇ ದಿನಗಳಲ್ಲಿ ಅಂತಿಮ ತೀರ್ಪು ಪ್ರಕಟಿಸುತ್ತೇವೆ. ಅಲ್ಲಿಯವರೆಗೆ ಧಾರ್ಮಿಕ ಗುರುತುಗಳನ್ನ ಬಳಸಬಾರದು ಎಂದು ಕೋರ್ಟ್ ಹೇಳಿದೆ.