ಹಿಂದೂ ಮುಖಂಡರ ಹತ್ಯೆಗೆ ಸಂಚು: 13 ಆರೋಪಿಗಳ ಆರೋಪ ಸಾಬೀತು

ಗುರುವಾರ, 15 ಸೆಪ್ಟಂಬರ್ 2016 (18:16 IST)
ಪರ್ತಕರ್ತರು ಹಾಗೂ ಹಿಂದೂ ಸಂಘಟನೆಯ ಮುಖಂಡರ ಹತ್ಯೆಗೆ ಸಂಚು ರೂಪಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ 13 ಆರೋಪಿಗಳ ವಿರುದ್ಧ ಆರೋಪ ಸಾಬೀತಾಗಿದ್ದು, ರಾಷ್ಟ್ರೀಯ ತನಿಖಾ ದಳ ಆರೋಪಿಗಳ ವಿರುದ್ಧ ಕೋರ್ಟ್‌ಗೆ ಚಾರ್ಜ್‌ಶೀಟ್ ಸಲ್ಲಿಕೆ ಮಾಡಿತ್ತು.
 
ಕರ್ನಾಟಕ, ಗೋವಾ, ಮಹಾರಾಷ್ಟ್ರ ಹಾಗೂ ತೆಲಂಗಾಣ ರಾಜ್ಯದಲ್ಲಿ ಹಿಂದೂ ಪರ ಸಂಘಟನೆಯ ಮುಂಖಡರ ಹತ್ಯೆಗೆ ಸಂಚು ರೂಪಿಸಿದ ಪ್ರಕರಣದಲ್ಲಿ 14 ಆರೋಪಿಗಳನ್ನು ಬಂಧಿಸಲಾಗಿತ್ತು. ಇದೀಗ 14 ಆರೋಪಿಗಳ ಪೈಕಿ 13 ಆರೋಪಿಗಳ ವಿರುದ್ಧ ಆರೋಪ ಸಾಬೀತಾಗಿದೆ. 
 
ಪ್ರಕರಣಕ್ಕೆ ಸಂಬಂಧಿಸಿದಂತೆ ಝಾಕೀರ್ ಎನ್ನುವ ಆರೋಪಿ ತಲೆ ಮರೆಸಿಕೊಂಡಿದ್ದು, ಈ ಆರೋಪಿಗಳು ಸಂಸದ ಪ್ರತಾಪ್ ಸಿಂಹ, ವಿಜಯ್ ಸಂಕೇಶ್ವರ್ ಹತ್ಯೆಗೆ ಸಂಚು ರೂಪಿಸಿದ್ದರು. 
 
ಮೊದಲು ಬೆಂಗಳೂರಿನ ಸಿಸಿಬಿ ಪೊಲೀಸರು ಈ ಕುರಿತು ಪ್ರಕರಣ ದಾಖಲಿಸಿಕೊಂಡಿದ್ದರು. ನಿಷೇಧಿತ ಲಷ್ಕರ್- ಎ- ತೋಯ್ಬಾ ಸಂಘಟನೆಯ ಸದಸ್ಯರು ರಾಜ್ಯದ ಹಿಂದೂ ಪರ ಸಂಘಟನೆಯ ಸದಸ್ಯರನ್ನು ಕೊಲೆ ಮಾಡಲು ಸಂಚು ರೂಪಿಸಿದ್ದರು. 

 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ