ಹಿಂದೂ ವಿದ್ಯಾರ್ಥಿಗಳಿಗೆ ನಮಾಜ ಮಾಡುವಂತೆ ಒತ್ತಾಯಿಸಿದ ಶಿಕ್ಷಕರು

ಗುರುವಾರ, 3 ಆಗಸ್ಟ್ 2017 (16:18 IST)
ನಗರದ ಶಾಲೆಯ ಶಿಕ್ಷಕರು ಹಿಂದು ವಿದ್ಯಾರ್ಥಿಗಳಿಗೆ ನಮಾಜ್ ಮಾಡುವಂತೆ ಒತ್ತಡ ಹೇರುತ್ತಿರುವ ಆಘಾತಕಾರಿ ಸುದ್ದಿ ಬಹಿರಂಗವಾಗಿದೆ.
 
ಹಿಂದು ವಿದ್ಯಾರ್ಥಿಗಳು ನಮಾಜ್ ಮಾಡಲು ನಿರಾಕರಿಸಿದಲ್ಲಿ ಶಿಕ್ಷಕರು ಛಡಿ ಏಟು ನೀಡಿ ಶಿಕ್ಷೆಗೊಳಪಡಿಸುತ್ತಿದ್ದಾರೆ ಎಂದು ವಿದ್ಯಾರ್ಥಿಗಳ ಪೋಷಕರು ತಿಳಿಸಿದ್ದಾರೆ.
 
ಮಾರಿ ಗ್ರಾಮದಲ್ಲಿರುವ ಮೆವಾತ್ ಮಾಡೆಲ್ ಪಬ್ಲಿಕ್ ಸ್ಕೂಲ್‌ನಲ್ಲಿ ಮೂವರು ಶಿಕ್ಷಕರು ವಿದ್ಯಾರ್ಥಿಗಳಿಗೆ ಇಸ್ಲಾಂಗೆ ಮತಾಂತರಗೊಳ್ಳಲು ಒತ್ತಾಯಿಸಿದ್ದಾರೆ ಎಂದು ಪೋಷಕರು ಬಹಿರಂಗಪಡಿಸಿದ್ದಾರೆ.
 
ಮೂರನೇ ಶಿಕ್ಷಕ ವರ್ಗಾಯಿಸಲ್ಪಟ್ಟಾಗ ಜಿಲ್ಲೆಯ ಮ್ಯಾಜಿಸ್ಟ್ರೇಟ್ ಎರಡು ಶಿಕ್ಷಕರನ್ನು ಅಮಾನತುಗೊಳಿಸಿದ್ದಾನೆ. ಅಷ್ಟರಲ್ಲಿ, ಘಟನೆಯ ಆಡಳಿತಾತ್ಮಕ ತನಿಖೆ ನಡೆಯುತ್ತಿದೆ ಎಂದು ಹರಿಯಾಣ ಸರ್ಕಾರ ಹೇಳಿದೆ.
 
ಘಟನೆಯ ಬಗ್ಗೆ ಮಾಹಿತಿ ಬಹಿರಂಗವಾಗುತ್ತಿದ್ದಂತೆ ಜಿಲ್ಲಾಧಿಕಾರಿಗಳು, ಇಬ್ಬರು ಶಿಕ್ಷಕರನ್ನು ಅಮಾನತುಗೊಳಿಸಿ ಒಬ್ಬ ಶಿಕ್ಷಕನನ್ನು  ವರ್ಗಾವಣೆ ಮಾಡಿದ್ದಾರೆ. ಶಾಲಾ ಶಿಕ್ಷಣ ಮಂಡಳಿಯ ವಿರುದ್ಧ ತನಿಖೆ ಮುಂದುವರಿದಿದೆ ಎಂದು ಹರಿಯಾಣಾ ಸರಕಾರ ತಿಳಿಸಿದೆ.

 ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ