ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಾಲಯದ ಹಣವನ್ನು ದೇವಾಲಯಗಳ ಅಭಿವೃದ್ಧಿಗೆ ಬಳಸುವ ಬದಲು ಮಸೀದಿ, ಚರ್ಚ್, ಇತರೆ ಅಭಿವೃದ್ಧಿ ಕೆಲಸಗಳಿಗೆ ಬಳಸಲಾಗುತ್ತಿದೆ ಎಂಬ ಆರೋಪಗಳಿತ್ತು. ಇದರಿಂದಾಗಿ ದೇವಾಲಯಗಳಿಗೆ ಬರುವ ಭಕ್ತರು ಹುಂಡಿಗೆ ದುಡ್ಡು ಹಾಕಲೂ ಹಿಂದು ಮುಂದು ನೋಡುವಂತಾಗಿತ್ತು.
ಈ ಹಿನ್ನಲೆಯಲ್ಲಿ ಈಗ ಸರ್ಕಾರವೇ ದೇವಾಲಯದ ಹಣ ದೇವಾಲಯಗಳ ಅಭಿವೃದ್ಧಿಗಷ್ಟೇ ಬಳಕೆಯಾಗುತ್ತದೆ ಎಂದು ಎಲ್ಲಾ ಮುಜರಾಯಿ ಇಲಾಖೆಯ ಅಧೀನದಲ್ಲಿ ಬರುವ ದೇವಾಲಯಗಳಲ್ಲಿ ಫಲಕ ಹಾಕಿ ಭಕ್ತರ ವಿಶ್ವಾಸ ಗಳಿಸಲು ಮುಂದಾಗಿದೆ. ಮುಜರಾಯಿ ಇಲಾಖೆ ವ್ಯಾಪ್ತಿಯಲ್ಲಿ 36,000 ದೇವಾಲಯಗಳಿವೆ. ಈ ಎಲ್ಲಾ ದೇವಾಲಯಗಳಲ್ಲಿ ಇಂತಹದ್ದೊಂದು ಫಲಕ ಹಾಕಲು ಸ್ವತಃ ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಸೂಚಿಸಿದ್ದಾರಂತೆ.