ಯಾದಗಿರಿಯಲ್ಲಿ ಹೈ-ಕ ದಿನಾಚರಣೆ ಸಂಭ್ರಮ

ಸೋಮವಾರ, 17 ಸೆಪ್ಟಂಬರ್ 2018 (18:53 IST)
ಹೈದ್ರಾಬಾದ್ ಕರ್ನಾಟಕ ವಿಮೋಚನೆ ದಿನಾಚರಣೆ ಹಿನ್ನೆಲೆಯಲ್ಲಿ ಯಾದಗಿರಿಯಲ್ಲಿ  ಜಿಲ್ಲಾ ಉಸ್ತುವಾರಿ ಸಚಿವರಿಂದ ಧ್ವಜಾರೋಹಣ ನೆರವೇರಿತು.

ಹೈದ್ರಾಬಾದ್ ಕರ್ನಾಟಕ ವಿಮೋಚನೆ ದಿನಾಚರಣೆ ಹಿನ್ನೆಲೆಯಲ್ಲಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸಚಿವ ಹಾಗೂ ಯಾದಗಿರಿಯ ಜಿಲ್ಲಾ ಉಸ್ತುವಾರಿ ಸಚಿವ ರಾಜಶೇಖರ. ಬಿ. ಪಾಟೀಲ್ ಅವರಿಂದ ರಾಷ್ಟ್ರಧ್ವಜಾರೋಹಣ ನೆರವೇರಿತು.
ಸರಕಾರಿ ಪದವಿ ಪೂರ್ವ ಕಾಲೇಜ್ ಮೈದಾನದಲ್ಲಿ ರಾಷ್ಟ್ರದ ತ್ರಿವರ್ಣ ಧ್ವಜಾರೋಹಣ ಮಾಡಿದರು. ಬಳಿಕ ಮಾತನಾಡಿದ ಅವರು, ಹೈದ್ರಾಬಾದ್ ಕರ್ನಾಟಕದ ಅಭಿವೃದ್ಧಿಗಾಗಿ ಶ್ರಮಿಸುತ್ತೇನೆ. ಇಲ್ಲಿನ ಪ್ರಮುಖ ಸಮಸ್ಯೆಗಳಿಗೆ ಸ್ಪಂದಿಸುತ್ತೇನೆ ಎಂದು ಹೇಳಿದರು.
ಜಿಟಿ ಜಿಟಿ ಮಳೆ ಹಿನ್ನೆಲೆ ವೇದಿಕೆ ಟೆಂಟ್ ಸ್ವಲ್ಪ ಸಮಯ ಹನಿ, ಹನಿ, ಸೋರುತಿತ್ತು.

ಮಳೆಯಿಂದ ಮೈದಾನ ಕೆಸರು ತುಂಬಿದ್ರಿಂದ ಪೊಲೀಸ್ ಪರೇಡ್ ರದ್ದು ಮಾಡಲಾಗಿತ್ತು. ನಂತರ ವೇದಿಕೆ ಮೇಲೆ ವಿವಿಧ ಶಾಲಾ-ಕಾಲೇಜ್ ವಿದ್ಯಾರ್ಥಿಗಳಿಂದ ಕೋಲಾಟ, ಜಾನಪದ ನೃತ್ಯ, ದೇಶ ಭಕ್ತಿಗೀತೆ, ಸ್ವಾತಂತ್ರ್ಯ ಹೋರಾಟಗಾರರ ವೇಷಭೂಷಣ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ