ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಹೆಚ್.ಕೆ.ಕುಮಾರಸ್ವಾಮಿ ರಾಜೀನಾಮೆ

ಗುರುವಾರ, 12 ಡಿಸೆಂಬರ್ 2019 (10:52 IST)
ಬೆಂಗಳೂರು : ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಹೆಚ್.ಕೆ.ಕುಮಾರಸ್ವಾಮಿ ರಾಜೀನಾಮೆ ನೀಡಲು ನಿರ್ಧಾರ ಮಾಡಿದ್ದಾರೆ ಎಂಬುದಾಗಿ ತಿಳಿದುಬಂದಿದೆ.



ಉಪಚುನಾವಣೆಯಲ್ಲಿ ಜೆಡಿಎಸ್ ಹೀನಾಯವಾಗಿ ಸೋಲನುಭವಿಸಿದ ಹಿನ್ನಲೆಯಲ್ಲಿ ಈ ಸೋಲಿನ ನೈತಿಕ ಹೊಣೆ ಹೊತ್ತು ಹೆಚ್.ಕೆ.ಕುಮಾರಸ್ವಾಮಿ ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧಾರ ಮಾಡಿದ್ದಾರೆ ಎನ್ನಲಾಗಿದೆ.
ಆದರೆ ಪಕ್ಷದ ನಾಯಕರು ತಮ್ಮನ್ನ ಕಡೆಗಣಿಸಿದ್ದರಿಂದ ಬೇಸರಗೊಂಡ ಅವರು ರಾಜೀನಾಮೆ ನೀಡುವ ನಿರ್ಧಾರ ಮಾಡಿದ್ದಾರೆ ಎಂಬ ಮಾತು ಕೂಡ ರಾಜಕೀಯ ವಲಯದಲ್ಲಿ ಕೇಳಿಬಂದಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ