ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಎಚ್ ಕೆ ಪಾಟೀಲ್ ರೋಷಾವೇಷ

ಬುಧವಾರ, 11 ಜುಲೈ 2018 (11:13 IST)
ಬೆಂಗಳೂರು: ವಿಧಾನಸೌಧದಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಶಾಸಕಾಂಗ ಪಕ್ಷ ಸಭೆಯಲ್ಲಿ ಹಿರಿಯ ಶಾಸಕ ಎಚ್ ಕೆ ಪಾಟೀಲ್ ಆಕ್ರೋಶದಿಂದಲೇ ಮಾತನಾಡಿದ್ದಾರೆ.

ಬಜೆಟ್ ನಲ್ಲಿ ಉತ್ತರ ಕರ್ನಾಟಕವನ್ನು ಸಂಪೂರ್ಣವಾಗಿ ನಿರ್ಲಕ್ಷಿಸಲಾಗಿದೆ. ಉತ್ತರ ಕರ್ನಾಟಕಕ್ಕೆ ಅನ್ಯಾಯ ಮಾಡಲಾಗಿದೆ. ಕಾಂಗ್ರೆಸ್ ಶಾಸಕರ ಕ್ಷೇತ್ರಗಳಿಗೆ ಅನುದಾನ ಕೊಟ್ಟಿಲ್ಲ. ಹೀಗೇ ಆದರೆ ಮುಂಬರುವ ಲೋಕಸಭೆ ಚುನಾವಣೆ ಎದುರಿಸೋದು ಹೇಗೆ? ನಮ್ಮ ಮತದಾರರಿಗೆ ಏನಂತ ಉತ್ತರ ಕೊಡಬೇಕು ಎಂದು ಎಚ್ ಕೆ ಪಾಟೀಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನು ಬಜೆಟ್ ನಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಳ ಮಾಡಿರುವುದಕ್ಕೂ ಕಾಂಗ್ರೆಸ್ ಶಾಸಕರು ಆಕ್ಷೇಪ ವ್ಯಕ್ತಪಡಿಸಿದ್ದು, ಜೆಡಿಎಸ್ ನಾಯಕರ ಜತೆ ಮಾತುಕತೆ ಮಾಡಲು ಒತ್ತಾಯಿಸಿದ್ದಾರೆ ಎಂದು ತಿಳಿದುಬಂದಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ