ಸೋಂಕಿತರಿಗೆ ಮನೆಯಲ್ಲೇ ಆರೈಕೆ : ಸುಧಾಕರ್

ಭಾನುವಾರ, 16 ಜನವರಿ 2022 (15:27 IST)
ಬೆಂಗಳೂರು : ಎಷ್ಟೇ ಜನರಿಗೆ ಸೋಂಕು ತಗುಲಿದರೂ ಮನೆಯಲ್ಲಿ ಆರೈಕೆ ಮಾಡುವ ವ್ಯವಸ್ಥೆ ಮಾಡುತ್ತಿದ್ದೇವೆ.

ಈ ಮೂಲಕ ಕೊರೊನಾ ಮೂರನೇ ಅಲೆಯನ್ನು ನಿಯಂತ್ರಣ ಮಾಡಲು ವಿಶೇಷ ಸಿದ್ಧತೆ ಮಾಡಿಕೊಳ್ಳುತ್ತಿದ್ದೇವೆ ಎಂದು ಆರೋಗ್ಯ ಸಚಿವ ಡಾ. ಸುಧಾಕರ್ ತಿಳಿಸಿದರು.

ಬಸವನಗುಡಿಯ ಅಬಲಾಶ್ರಮದಲ್ಲಿ ಸ್ವಾಸ್ಥ್ಯ ಹೆಸರಿನಲ್ಲಿ ನಡೆದ ಕಾರ್ಯಕ್ರಮವನ್ನು ಉದ್ಘಾಟಿಸಿದ ಅವರು, ಕೊರೊನಾ ಮೂರನೇ ಅಲೆಗೆ ನಾವು ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದ್ದೇವೆ.

ಈ ಕುರಿತಾಗಿ ನಿನ್ನೆ 10 ಸಾವಿರ ವೈದ್ಯರ ಜೊತೆ ಸಂವಾದ ಮಾಡಿದ್ದೇನೆ. ಇವರು ಹೋಂ ಐಸೋಲೇಷನ್ ಇದ್ದಾಗ ಹೇಗೆ ಟೆಲಿ ಟ್ರೈನಿಂಗ್ ಮಾಡಬೇಕು ಎನ್ನುವುದರ ಬಗ್ಗೆಯೂ ಮಾಹಿತಿ ನೀಡಿದ್ದಾರೆ ಎಂದು ಹೇಳಿದರು.

ವಿಶ್ವದಲ್ಲಿ ಕೊರೊನಾ ಸೋಂಕಿತರ ಪ್ರಮಾಣ ಜಾಸ್ತಿಯಾಗಿದೆ. ಸಮಾಧಾನದ ವಿಚಾರ ಎಂದರೆ ರೋಗದ ಲಕ್ಷಣ ಕಡಿಮೆ ಇದೆ. ಜೊತೆಗೆ ಆಸ್ಪತ್ರೆಯಲ್ಲಿ ದಾಖಲಾಗುವವರ ಸಂಖ್ಯೆ ಕಡಿಮೆ ಇದೆ. ಇದರಿಂದಾಗಿ ಕೊರೊನಾ ಮೂರನೇ ಅಲೆಯನ್ನು ನಿಯಂತ್ರಣ ಮಾಡಬಹುದು. ಫೆಬ್ರವರಿಯಲ್ಲಿ ಇದರ ತೀವ್ರತೆ ಕಡಿಮೆಯಾಗಬಹುದು ಎಂದು ಹೇಳಲಾಗುತ್ತದೆ ಎಂದರು.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ