ಸುದ್ದಿಗಾರರೊಂದಿಗೆ ಸಚಿವರು ಮಾತನಾಡುತ್ತಿದ್ದರು.
ಮುಖ್ಯಮಂತ್ರಿಗಳ ನಿವಾಸದ ಬಳಿ, ಬಂದೋಬಸ್ತ್ ಕರ್ತವ್ಯಕ್ಕೆ ನಿಯೋಜಿತವಾಗಿದ್ದ ಇಬ್ಬರು ಪೊಲೀಸ್ ಸಿಬ್ಬಂದಿ ನಿಷೇಧಿತ ಗಾಂಜಾ ಮಾರಾಟ ಜಾಲದೊಂದಿಗೆ ಸಂಪರ್ಕ ಹೊಂದಿದ್ದರು ಎನ್ನಲಾದ ವಿಷಯಕ್ಕೆ ಸಂಬಂಧಿಸಿದಂತೆ, ಕಾನೂನು ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ. "ಇಂತಹ ಹೀನ ಕೃತ್ಯಗಳನ್ನು ಸಹಿಸಲಾಗುವುದಿಲ್ಲ, ಕೇವಲ ಬೆರಳಣಿಕೆ ಯಷ್ಟು ಮಂದಿ ಸಿಬ್ಬಂದಿಯಿಂದ, ಸುಮಾರು ಒಂದು ಲಕ್ಷಕ್ಕೂ ಮೀರಿ ಇರುವ ಇಲಾಖೆ ಸಿಬ್ಬಂದಿಗಳಿಗೆ ಕೆಟ್ಟ ಹೆಸರು ಬರುತ್ತದೆ" ಎಂದರು.
ಅಪರಾಧ ಜಗತ್ತನ್ನು ಬಗ್ಗು ಬಡಿಯಲು ನೇಮಕವಾದ, ಸಿಬ್ಬಂದಿಗಳು, ಅವರೊಂದಿಗೇ ಶಾಮೀಲಾಗುವುದು ಅಕ್ಷಮ್ಯ. ಅಪರಾಧ ಎಂದು ಅಭಿಪ್ರಾಯಿಸಿದ ಸಚಿವರು "ಅಂಥವರನ್ನು ಕೇವಲ ಸೇವೆಯಿಂದ ಅಮಾನತು ಮಾಡಿದರೆ ಸಾಲಾದು, ಅಂಥವರು, ಇಲಾಖೆಯಲ್ಲಿ ಇರಬಾರದು," ಎಂದು ಖಾರವಾಗಿ ನುಡಿದರು. "ಈ ವಿಷಯಕ್ಕೆ ಸಂಬಂಧಿಸಿದಂತೆ ಸಂಪೂರ್ಣ ವರದಿ ಪಡೆದುಕೊಂಡು ಮುಂದಿನ ಕ್ರಮ ತೆಗೆದುಕೊಳ್ಳಲಾಗುವುದು" ಎಂದರು.
ಕೆಲವು ಯುವ ಕಾಂಗ್ರೆಸ್ ನಾಯಕರು, ಕಳೆದ ರಾತ್ರಿ ಹೊಡೆದಾಡಿಕೊಂಡಿದ್ದಾರೆ, ಎನ್ನಲಾದ ವಿಷಯಕ್ಕೆ ಸಂಬಂಧಿಸಿದಂತೆ, ಉತ್ತರಿಸಿದ ಸಚಿವರು, "ನಗರದ ಪೊಲೀಸರು, ಈವರೆಗೆ ಯಾವುದೇ ದೂರನ್ನು ಯಾರಿಂದಲೂ ಪಡೆದುಕೊಂಡಿಲ್ಲ, ದೂರು ದಾಖಲಾದರೆ, ನಮ್ಮ ಪೊಲೀಸರು ವಿಚಾರಣೆ ನಡೆಸುತ್ತಾರೆ" ಎಂದರು.