ಪುಂಡಾಟಿಕೆ ನಡೆಸಿದವರ ವಿರುದ್ಧ ಕಠಿಣ ಕ್ರಮ: ಗೃಹ ಸಚಿವ ಆರಗ ಜ್ಞಾನೇಂದ್ರ

ಭಾನುವಾರ, 19 ಡಿಸೆಂಬರ್ 2021 (20:56 IST)
ಬೆಂಗಳೂರು: ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ ಪ್ರತಿಮೆ ಭಗ್ನಗೊಳಿಸಿ, ಪುಂಡಾಟಿಕೆ ನಡೆಸಿದವರ ವಿರುದ್ಧ ಕಠಿಣ ಕ್ರಮ ಜರಗಿಸಲಾಗುತ್ತಿದೆ ಎಂದು ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.
ಗಡಿ ಜಿಲ್ಲೆಯಲ್ಲಿ ಕನ್ನಡ ಹಾಗೂ ಮರಾಠಿ ಮಾತನಾಡುವ ಜನತೆ, ಅತ್ಯಂತ ಅನ್ಯೋನ್ಯತೆ, ಪ್ರೀತಿ ಹಾಗೂ ಸಾಮರಸ್ಯದಿಂದ ಇದ್ದಾರೆ. ರಾಯಣ್ಣ ಹಾಗೂ ಶಿವಾಜಿಯವರಂಥ ಮಹನೀಯರ ಬಗ್ಗೆ ಎಳ್ಳಷ್ಟೂ ಗೌರವ ವಿಲ್ಲದ ದುಷ್ಕರ್ಮಿಗಳ ಒಂದೇ ಉದ್ದೇಶ, ಸಮಾಜದಲ್ಲಿನ ನೆಮ್ಮದಿಗೆ ಭಂಗ ತರುವುದಾಗಿದೆ. ಅಂಥವರನ್ನು ಬಗ್ಗು ಬಡಿಯಲಾಗುವುದು ಎಂದು ಗೃಹ ಸಚಿವರು ಎಚ್ಚರಿಸಿದ್ದಾರೆ.
ಬೆಳಗಾವಿ ಹಾಗೂ ಬೆಂಗಳೂರಿನ ಘಟನೆಗಳ ಬಗ್ಗೆ, ಸಂಬಂಧಿಸಿದ ಪೊಲೀಸ್ ಹಾಗೂ ಇತರ ಅಧಿಕಾರಿಗಳೊಂದಿಗೆ ಸತತ ಸಂಪರ್ಕದಲ್ಲಿದ್ದೇನೆ. ಶಾಂತಿ ಹಾಗೂ ಸುವ್ಯವಸ್ಥೆ ಕಾಪಾಡಿಕೊಳ್ಳಲು ಎಲ್ಲಾ ಅಗತ್ಯ ಕ್ರಮಗಳನ್ನು, ತೆಗೆದುಕೊಳ್ಳಲು ನಿರ್ದೇಶಿಸಿದ್ದೇನೆ ಎಂದು ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ