ಅಡಗಿರುವ ನಕ್ಸಲರು ಶರಣಾಗುವಂತೆ ಗೃಹಸಚಿವ ಜಿ ಪರಮೇಶ್ವರ್ ಸೂಚನೆ

Sampriya

ಶನಿವಾರ, 30 ನವೆಂಬರ್ 2024 (18:54 IST)
Photo Courtesy X
ಬೆಂಗಳೂರು: ನಕ್ಸಲ್ ನಾಯಕ ವಿಕ್ರಂ ಗೌಡನ ಹತ್ಯೆ ಬಳಿಕ ಅಡಕಿ ಕುಳಿತಿರುವ ನಕ್ಸಲರು ತಮ್ಮ ನಿಲುವು ಬದಲಾಯಿಸಿ, ಕೂಡಲೇ ಶರಣಾಗುವಂತೆ ಗೃಹಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು.

ಈ ಬಗ್ಗೆ ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶರಣಾಗುವ ನಕ್ಸಲರಿಗೆ ಸರ್ಕಾರದಿಂದಲೇ ಜೀವನಕ್ಕೆ ಪ್ಯಾಕೇಜ್ ಘೋಷಣೆ ಮಾಡಿದ್ದು, ಶರಣಾಗುವಂತೆ ನಕ್ಸಲರಿಗೆ ಅರಣ್ಯಗಳಲ್ಲಿ ಕೂಂಬಿಂಗ್ ನಿರತ ಪೊಲೀಸ್ ಪಡೆ ಆಹ್ವಾನ ನೀಡಿದೆ. ಹಾಗಾಗಿ ಶರಣಾದರೆ ನಕ್ಸಲರಿಗೇ ಒಳ್ಳೆಯದು ಎಂದು ಸ್ಪಷ್ಟಪಡಿಸಿದರು.

ಹಾಸನದಲ್ಲಿ ಕಾಂಗ್ರೆಸ್ ನಡೆಸುವ ಸ್ವಾಭಿಮಾನ ಸಮಾವೇಶಕ್ಕೆ ಅಸಮಾಧಾನದ ಅನಾಮಧೇಯ ಪತ್ರದ ಕುರಿತಂತೆ ಮಾತನಾಡಿದ ಡಾ.ಪರಮೇಶ್ವರ್, ಸಮಾವೇಶಕ್ಕೆ ಯಾರ ಅಸಮಾಧಾನವೂ ಇಲ್ಲ. ಅನಾಮಧೇಯ ಪತ್ರವನ್ನು ಬಿಜೆಪಿಯವರು ಯಾಕೆ ಬರೆಯಬಾರದು? ಅವರೇ ಅನಾಮಧೇಯ ಪತ್ರಗಳನ್ನು ಬರೆಯುತ್ತಾರೆ ಎಂದು ಆರೋಪ ಮಾಡಿದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ