ಯುವತಿಯರ ಮೇಲೆ ಹೆಚ್ಚುತ್ತಿರುವ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ರಾಜ್ಯ ಸರಕಾರದ ವೈಫಲ್ಯವೇ ಕಾರಣವಾಗಿದ್ದು, ಈ ಕೂಡಾಲೇ ಗೃಹ ಸಚಿವ ಡಾ.ಜಿ.ಪರಮೇಶ್ವರ್ ನೈತಿಕ ಹೊಣೆ ಹೊತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿ ಎಂದು ಬಿಜೆಪಿ ಮಹಿಳಾ ಮೋರ್ಚಾ ಒತ್ತಾಯಿಸಿದೆ.
ಹೊಸ ವರ್ಷಾಚರಣೆ ಸಂದರ್ಭದಲ್ಲಿ ಕೆಲ ಕಿಡಿಗೇಡಿಗಳು ಎಂಜಿ ರಸ್ತೆಯಲ್ಲಿ ನೆರೆದಿದ್ದ ಮಹಿಳೆಯರನ್ನು ಲೈಂಗಿಕವಾಗಿ ಹಿಂಸಿಸಿದ್ದರು. ಈ ದೃಶ್ಯಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಭದ್ರತೆಗೆಂದು ಸಾವಿರಾರು ಪೊಲೀಸರ ನಿಯೋಜನೆಗೊಂಡಿದ್ದರಾದರೂ ಕಿಡಿಗೇಡಿಗಳನ್ನು ನಿಯಂತ್ರಿಸಲು ವಿಫಲರಾಗಿದ್ದರು. ಈ ಘಟನೆ ದೇಶಾದ್ಯಂತ ಭಾರೀ ಸುದ್ದಿಯಾಗಿತ್ತು.