ಎಸ್ಎಸ್ಎಲ್ ಸಿ ಪರೀಕ್ಷೆ ವೇಳೆ ಹಿಜಾಬ್ ಧರಿಸಬಹುದಾ ಎಂದರೆ ಗೃಹಸಚಿವ ಪರಮೇಶ್ವರ್ ಹೀಗೆ ಹೇಳೋದಾ

Krishnaveni K

ಮಂಗಳವಾರ, 4 ಫೆಬ್ರವರಿ 2025 (16:28 IST)
ಬೆಂಗಳೂರು: ಇನ್ನೇನು ಎಸ್ಎಸ್ಎಲ್ ಸಿ ಪರೀಕ್ಷೆ ಬರುತ್ತಿದ್ದು ಪರೀಕ್ಷೆ ಬರೆಯಲು ಬರುವ ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್ ಧರಿಸಬಹುದೇ ಎಂಬ ಪ್ರಶ್ನೆಗೆ ಗೃಹಸಚಿವ ಜಿ ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ.

ರಾಜ್ಯದಲ್ಲಿ ಬಿಜೆಪಿ ಸರ್ಕಾರವಿದ್ದಾಗ ಹಿಜಾಬ್ ನಿಷೇಧಿಸಿದ್ದು ಭಾರೀ ವಿವಾದಕ್ಕೆ ಕಾರಣವಾಗಿತ್ತು. ಅದಾದ ಬಳಿಕ ಹಾಲಿ ಕಾಂಗ್ರೆಸ್ ಸರ್ಕಾರ ಹಿಜಾಬ್ ಮೇಲಿನ ನಿಷೇಧ ಹಿಂತೆಗೆದುಕೊಂಡಿತ್ತು. ಈಗ ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ಹಿಜಾಬ್ ಧರಿಸಬಹುದೇ ಎಂಬ ಪ್ರಶ್ನೆ ಎದುರಾಗಿದೆ.

ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ಮುಚ್ಚಿದ ಅಂಗಿ ಹಾಕಿಕೊಂಡು ಬಂದರೆ ಕಾಪಿ ಮಾಡುವ ಸಾಧ್ಯತೆಯಿರುತ್ತದೆ. ಹೀಗಾಗಿ ಹಿಜಾಬ್ ನಂತಹ ವಸ್ತ್ರ ತೊಡಲು ಅವಕಾಶವಿರಲ್ಲ. ಆದರೆ ಈ ಬಾರಿ ಅವಕಾಶ ನೀಡಲಾಗುತ್ತದೆಯೇ ಎಂಬ ಪ್ರಶ್ನೆಗೆ ಸಚಿವರು ಇನ್ನೂ ಈ ಬಗ್ಗೆ ತೀರ್ಮಾನ ಮಾಡಿಲ್ಲ ಎಂದಿದ್ದಾರೆ.

ಈ  ಬಗ್ಗೆ ಚರ್ಚೆ ಮಾಡಿ ತೀರ್ಮಾನ ತೆಗೆದುಕೊಳ್ಳುತ್ತೇವೆ. ಇನ್ನೊಂದು ತಿಂಗಳಲ್ಲಿ ನಿರ್ಧಾರ ಮಾಡಲಿದ್ದೇವೆ ಎಂದಿದ್ದಾರೆ. ಪ್ರತೀ ವರ್ಷವೂ ಪಬ್ಲಿಕ್ ಪರೀಕ್ಷೆ ಬಂದಾಗ ಹಿಜಾಬ್ ವಿವಾದವಾಗುತ್ತದೆ. ಈ ಬಾರಿ ಅದನ್ನು ಸರ್ಕಾರ ಹೇಗೆ ನಿಭಾಯಿಸುತ್ತದೆ ನೋಡಬೇಕಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ