ಪಾಕಿಸ್ತಾನ ಜಿಂದಾಬಾದ್ ಘೋಷಣೆ ಎಫ್ಎಸ್ಎಲ್ ವರದಿ ಬಂದಿಲ್ಲ: ಗೃಹಸಚಿವ ಪರಮೇಶ್ವರ್

Krishnaveni K

ಶುಕ್ರವಾರ, 1 ಮಾರ್ಚ್ 2024 (14:03 IST)
ಬೆಂಗಳೂರು: ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದಾರೆಯೇ ಎಂದು ಖಚಿತಪಡಿಸಲು ವಿಡಿಯೋವನ್ನು ಎಫ್ಎಸ್ಎಲ್ ಪರೀಕ್ಷೆಗೆ ಕಳುಹಿಸಲಾಗಿದ್ದು, ಇನ್ನೂ ವರದಿ ಕೈ ಸೇರಿಲ್ಲ ಎಂದು ಗೃಹಸಚಿವ ಜಿ. ಪರಮೇಶ್ವರ್ ಹೇಳಿದ್ದಾರೆ.

ರಾಜ್ಯಸಭೆ ಚುನಾವಣೆ ಫಲಿತಾಂಶದ ಬಳಿಕ ಕಾಂಗ್ರೆಸ್ ನಿಂದ ಆಯ್ಕೆಯಾದ ಸಂಸದ ಸೈಯದ್ ನಾಸಿರ್ ಹುಸೇನ್ ಬೆಂಬಲಿಗರೊಬ್ಬರು ಸಂಭ್ರಮಾಚರಣೆ ವೇಳೆ ವಿಧಾನಸೌದದಲ್ಲೇ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ್ದಾರೆನ್ನಲಾದ ವಿಡಿಯೋ  ವೈರಲ್ ಆಗಿತ್ತು. ಈ ಘಟನೆ ಆಡಳಿತಾರೂಢ ಕಾಂಗ್ರೆಸ್ ಮತ್ತು ವಿಪಕ್ಷ ಬಿಜೆಪಿ ನಡುವೆ ಮಾರಾಮಾರಿಗೆ ಕಾರಣವಾಗಿದೆ.

ಈ ಘಟನೆ ಬಗ್ಗೆ ಸಮಗ್ರ ತನಿಖೆ ನಡೆಸಲು ಎರಡು ತನಿಖಾ ತಂಡಗಳನ್ನೂ ರಚಿಸಲಾಗಿದೆ. ಮೊನ್ನೆಯೇ ವಿಡಿಯೋವನ್ನು ವಿಧಿ ವಿಜ್ಞಾನ ಪರೀಕ್ಷೆಗೆ ಕಳುಹಿಸಲಾಗಿತ್ತು. ಒಂದು ವೇಳೆ ಈ ವಿಡಿಯೋದಲ್ಲಿ ಪಾಕ್ ಪರ ಘೋಷಣೆ ಕೂಗಿದ್ದು ನಿಜವೆಂದು ವರದಿ ಬಂದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಗೃಹ ಸಚಿವರು, ಮುಖ್ಯಮಂತ್ರಿಗಳು ಸದನದಲ್ಲಿಯೇ ಹೇಳಿದ್ದರು.

ಇದೀಗ ಈ ಬಗ್ಗೆ ಪ್ರತಿಕ್ರಿಯಿಸಿರುವ ಅವರು ಆದಷ್ಟು ಬೇಗ ವರದಿ ಕೊಡಬೇಕೆಂದು ಎಫ್ಎಸ್ಎಲ್ ವಿಭಾಗಕ್ಕೆ ತಿಳಿಸಿದ್ದೇವೆ. ವರದಿ ಇನ್ನೂ ಕೈ ಸೇರಿಲ್ಲ. ಘೋಷಣೆ ಕೂಗಿದ್ದಕ್ಕೆ ಹಲವು ವಿಡಿಯೋಗಳಿವೆ. ಇದೆಲ್ಲವನ್ನೂ ಪರಿಶೀಲಿಸಬೇಕಾಗುತ್ತದೆ. ವರದಿ ಬಂದ ಬಳಿಕ ಅದರ ಆಧಾರದಲ್ಲಿ ಕ್ರಮ ಕೈಗೊಳ್ಳುತ್ತೇವೆ. ಆದರೆ ಈವರೆಗೆ ವರದಿ ಬಂದಿಲ್ಲ ಎಂದಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ