ಅರೆನಗ್ನ ಚಿತ್ರ ವೀಕ್ಷಣೆ: ಸಚಿವರ ವಿರುದ್ಧ ಬಿಜೆಪಿ ರಾಜಕೀಯ ಮಾಡುತ್ತಿದೆ ಎಂದ ಜಿ.ಪರಮೇಶ್ವರ್

ಸೋಮವಾರ, 14 ನವೆಂಬರ್ 2016 (19:05 IST)
ಟಿಪ್ಪು ಸುಲ್ತಾನ್ ಜಯಂತಿ ಆಚರಣೆ ವೇಳೆ ಶಿಕ್ಷಣ ಸಚಿವರಿಂದ ಯುವತಿಯರ ಅರೆನಗ್ನ ಚಿತ್ರ ವೀಕ್ಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಹೈಕಮಾಂಡ್ ಯಾವುದೇ ವರದಿ ಕೇಳಿಲ್ಲ. ಈ ವಿಚಾರದಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಆರೋಪಿಸಿದ್ದಾರೆ.
 
ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಟಿಪ್ಪು ಸುಲ್ತಾನ್ ಜಯಂತಿ ಕಾರ್ಯಕ್ರಮದಲ್ಲಿ ಶಿಕ್ಷಣ ಸಚಿವ ತನ್ವೀರ್ ಸೇಠ್ ಅಶ್ಲೀಲ ಚಿತ್ರ ವೀಕ್ಷಿಸಿದ್ದಾರೆ ಎಂದು ಆರೋಪಗಳು ಕೇಳಿ ಬಂದಿವೆ. ಆದರೆ, ಸಚಿವರ ವಿರುದ್ಧದ ಆರೋಪಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಹೈಕಮಾಂಡ್ ವರದಿ ಕೇಳಿಲ್ಲ. ಈ ವಿಷಯದಲ್ಲಿ ಬಿಜೆಪಿ ಸುಮ್ಮಣೆ ರಾಜಕೀಯ ಮಾಡುತ್ತಿದೆ ಎಂದು ಕಿಡಿಕಾರಿದರು. 
 
ಶಿಕ್ಷಣ ಸಚಿವ ತನ್ವೀರ್ ಸೇಠ್ ಮೇಲೆ ಕೇಳಿಬಂದಿರುವ ಆರೋಪದ ತನಿಖೆಯನ್ನು ಸೈಬರ್ ಸೆಲ್‌ಗೆ ವರ್ಗಾಯಿಸಲಾಗಿದ್ದು, ತನಿಖೆಯ ವರದಿ ಬಂದ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಜೊತೆ ಚರ್ಚಿಸಿ ಕ್ರಮ ಕೈಗೊಳ್ಳುತ್ತೇವೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಭರವಸೆ ನೀಡಿದ್ದಾರೆ. 


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ