ಪೊಲೀಸ್ ಸಿಬ್ಬಂದಿ ದುರ್ಮರಣಕ್ಕೆ ಕಣ್ಣೀರಿಟ್ಟ ಗೃಹ ಸಚಿವ
ಮೃತರನ್ನು ಅನಿಲ್, ಅವಿನಾಶ್ ಹಾಗೂ ದೀಕ್ಷಿತ್ ಎಂದು ಗುರುತಿಸಲಾಗಿದೆ. ಇವರೆಲ್ಲರೂ ಬೆಂಗಳೂರಿನ ಶಿವಾಜಿ ನಗರದ ಪೊಲೀಸ್ ಠಾಣೆಯ ಸಿಬ್ಬಂದಿಯಾಗಿದ್ದು, ತನಿಖೆಯ ಸಂಬಂಧ ತೆರಳುತ್ತಿದ್ದರು. ಅಪಘಾತದ ಸುದ್ದಿ ತಿಳಿದ ತಕ್ಷಣ ಸಚಿವರು ಹಿರಿಯ ಪೊಲೀಸ್ ಅಧಿಕಾರಿಗಳನ್ನು ಸಂಪರ್ಕಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.
ಗಾಯಗೊಂಡ ಸಿಬ್ಬಂದಿ ನೆರವಿಗೆ ಧಾವಿಸಿ, ಅತ್ಯುತ್ತಮ ಚಿಕಿತ್ಸೆ ದೊರಕಿಸಲು ಎಲ್ಲಾ ಅಗತ್ಯ ಕ್ರಮ ಜರುಗಿಸಬೇಕು. ಸಾರ್ವಜನಿಕರ ಪ್ರಾಣ ಹಾಗೂ ಆಸ್ತಪಾಸ್ತಿಗಳ ರಕ್ಷಿಸುವ ಕಾರ್ಯದಲ್ಲಿ ಪೊಲೀಸ್ ಸಿಬ್ಬಂದಿ ಮೃತಪಟ್ಟಿರುವುದು ಅತ್ಯಂತ ನೋವು ತಂದಿದೆ ಎಂದು ಸಚಿವರು ಹೇಳಿದ್ದಾರೆ.