ಪೊಲೀಸ್ ಅಧಿಕಾರಿಗಳಿಗೆ ಗೃಹ ಸಚಿವ ರಾಮಲಿಂಗಾರೆಡ್ಡಿ ಖಡಕ್ ವಾರ್ನಿಂಗ್

ಶನಿವಾರ, 9 ಸೆಪ್ಟಂಬರ್ 2017 (12:27 IST)
ಬೆಂಗಳೂರು ವಲಯ ಪೊಲೀಸ್ ಅಧಿಕಾರಿಗಳ ಸಭೆ ನಡೆಸಿದ ಗೃಹ ಸಚಿವ ರಾಮಲಿಂಗಾ ರೆಡ್ಡಿ ಖಡಕ್ ವಾರ್ನಿಂಗ್ ನೀಡಿದ್ದಾರೆ.
ವಿಕಾಸಸೌಧದಲ್ಲಿ ಬೆಂಗಳೂರಿನ ಡಿಸಿಪಿ, ಎಸಿಪಿ, ಇನ್ಸೆಪೆಕ್ಟರ್ ಮತ್ತು ಸಬ್‌ಇನ್ಸೆಪೆಕ್ಟರ್‌ಗಳ ಸಭೆಯಲ್ಲಿ ಮಾತನಾಡಿದ ಅವರು, ನಾನು ನೀಡುತ್ತಿರುವ ಆದೇಶಗಳು ಕಟ್ಟುನಿಟ್ಟಾಗಿ ಅನುಷ್ಠಾನಗೊಳ್ಳಬೇಕು ಎಂದು ತಿಳಿಸಿದ್ದಾರೆ.
 
ಪದೇ ಪದೇ ಗೂಂಡಾ ಚಟುವಟಿಕೆಗಳಲ್ಲಿ ಪಾಲ್ಗೊಂಡವರ ವಿರುದ್ಧ ಗೂಂಡಾ ಕಾಯ್ದೆ ಹಾಕಿ ಒಳಗೆ ತಳ್ಳಿ. ಹೆಣ್ಣುಮಕ್ಕಳನ್ನು ಕಾಡುವವರನ್ನು ಸುಮ್ನೆ ಬಿಡಬೇಡಿ ಎಂದು ಪೊಲೀಸ್ ಅಧಿಕಾರಿಗಳಿಗೆ ತಾಕೀತು ಮಾಡಿದ್ದಾರೆ.
 
ಬಾರ್‌ಗಳು ಬೆಳಿಗ್ಗೆ 10 ಗಂಟೆಗೆ ತೆರೆದು ರಾತ್ರಿ 11 ಗಂಟೆಗೆ ಮುಚ್ಚಬೇಕು.ಸಮಯ ಪಾಲನೆ ಮಾಡದ ಬಾರ್‌ಗಳ ವಿರುದ್ಧ ಕೇಸ್ ದಾಖಲಿಸಿ. ಯಾವುದೇ ಮುಲಾಜಿಗೆ ಒಳಗಾಗಬೇಡಿ ಎಂದು ಗೃಹ ಸಚಿವ ರಾಮಲಿಂಗಾರೆಡ್ಡಿ ಗುಡುಗಿದ್ದಾರೆ.
 
 ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ