ಗೃಹ ಸಚಿವ ಅರಗ ಜ್ಞಾನೇಂದ್ರ ಬಂಧನ -ಡಿ. ಕೆ. ಶಿವಕುಮಾರ್

ಗುರುವಾರ, 7 ಏಪ್ರಿಲ್ 2022 (14:38 IST)
ಸಮಾಜದಲ್ಲಿ ಅಶಾಂತಿ, ಜಾತಿ, ಧರ್ಮಗಳ ನಡುವೆ ವೈಷಮ್ಯ ಸೃಷ್ಟಿಗೆ ಪ್ರಚೋದಿಸುವಂತಹ ಹೇಳಿಕೆ ಕೊಟ್ಟಿರುವ ಗೃಹ ಸಚಿವ ಅರಗ ಜ್ಞಾನೇಂದ್ರ ಅವರನ್ನು ಮುಖ್ಯಮಂತ್ರಿಗಳು ವಜಾ ಮಾಡಬೇಕು' ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಆಗ್ರಹಿಸಿದ್ದಾರೆ.
ನಗರದ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಅಜಯ್ ಮಕಾನ್ ಅವರ ಜತೆ ಜಂಟಿಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಶಿವಕುಮಾರ್ ಅವರು, 'ಪೊಲೀಸ್ ಆಯುಕ್ತರು ಗೃಹ ಸಚಿವರ ವಿರುದ್ಧ ಸುಮೋಟೋ ಪ್ರಕರಣ ದಾಖಲಿಸಬೇಕು' ಎಂದು ಒತ್ತಾಯಿಸಿದರು. ಈ ಸಂದರ್ಭದಲ್ಲಿ ಅವರು ಹೇಳಿದ್ದಿಷ್ಟು:
 
'ನಮ್ಮ ರಾಜ್ಯದ ಗೃಹ ಸಚಿವರಿಗೆ ಸಾಮಾನ್ಯ ಪ್ರಜ್ಞೆ ಎಂಬುದೇ ಇಲ್ಲವಾಗಿದೆ. ಅವರು ಗೃಹ ಸಚಿವರಾಗಿ ಆ ಸ್ಥಾನದ ಪರವಾಗಿ ಮಾತನಾಡುತ್ತಿದ್ದಾರಾ, ಸರಕಾರದ ಪರವಾಗಿ ಮಾತನಾಡುತ್ತಾರಾ, ಅವರ ಪಕ್ಷ ಬಿಜೆಪಿ ಪರ ಮಾತನಾಡುತ್ತಾರಾ ಎಂಬ ಪ್ರಶ್ನೆ ಮೂಡುತ್ತದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ