ಹೋಂ ಕ್ವಾರಂಟೈನ್ ಕಟ್ಟುನಿಟ್ಟಿಗೆ ಸಚಿವೆ ಖಡಕ್ ಆದೇಶ

ಬುಧವಾರ, 3 ಜೂನ್ 2020 (16:58 IST)
ಕೋವಿಡ್-19 ಸಾಂಕ್ರಾಮಿಕ ರೋಗ ನಿಯಂತ್ರಣಕ್ಕಾಗಿ ಹೊರ ರಾಜ್ಯಗಳಿಂದ ಆಗಮಿಸಿದವರನ್ನು ಸಾಂಸ್ಥಿಕ ಹಾಗೂ
ಹೋಮ್ ಕ್ವಾರಂಟೈನ್ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು.

ಹೀಗಂತ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಹೊರ ರಾಜ್ಯದಿಂದ ಬರುವವರಿಗೆ ಜಿಲ್ಲೆಯ ಗಡಿಭಾಗದಲ್ಲಿ ಚೆಕ್‍ಪೋಸ್ಟ್‍ಗಳನ್ನು ಮತ್ತಷ್ಟು ಬಿಗಿಗೊಳಿಸಬೇಕು. ಕ್ವಾರಂಟೈನ್ ಕೇಂದ್ರಗಳ ಹಾಗೂ ಹೋಮ್ ಕ್ವಾರಂಟೈನ್ ನಿಯಮಗಳು ಕಟ್ಟುನಿಟ್ಟಾಗಿ ಪಾಲನೆಯಾಗಬೇಕು. ಕಂಟೈನ್ಮೆಂಟ್ ವಲಯಗಳ ಸೂಕ್ತ ನಿರ್ವಹಣೆಯಾಗಬೇಕು. ಕೋವಿಡ್-19 ಸಂಬಂಧಿಸಿದಂತೆ ಯಾವುದೇ ಲೋಪದೋಷಗಳಾಗದಂತೆ ಕಾರ್ಯನಿರ್ವಹಿಸಬೇಕು ಎಂದರು.

ವಿಜಯಪುರ ಜಿಲ್ಲೆಗೆ ಮಹಾರಾಷ್ಟ್ರ ರಾಜ್ಯದಿಂದ ಈವರೆಗೆ 21,113 ಜನ ವಲಸಿಗರು ಆಗಮಿಸಿದ್ದು, ಈವರೆಗೆ 21,015 ಜನರ ಗಂಟಲುದ್ರವ ಮಾದರಿ ಸಂಗ್ರಹಿಸಿ ಪರೀಕ್ಷೆಗಾಗಿ ಕಳುಹಿಸಲಾಗಿದೆ. 16,514 ಜನರ ವರದಿ ನೆಗೆಟಿವ್ ಬಂದಿದ್ದು, 69 ಪಾಸಿಟಿವ್ ಪ್ರಕರಣಗಳು ದೃಢಪಟ್ಟಿವೆ. 4432 ಪರೀಕ್ಷಾ ವರದಿ ಬರಬೇಕಾಗಿದೆ. ಮಹಾರಾಷ್ಟ್ರದಿಂದ 21,113, ಗೋವಾದಿಂದ 2,982, ಅನ್ಯ ರಾಜ್ಯಗಳಿಂದ 6,676 ಜನರು ವಿಜಯಪುರಕ್ಕೆ ಆಗಮಿಸಿದ್ದಾರೆ.



ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ