ರಾಜ್ಯದಲ್ಲಿ ಪ್ರಾಮಾಣಿಕ ಅಧಿಕಾರಿಗಳಿಗೆ ಬೆಲೆಯಿಲ್ಲ: ಶೆಟ್ಟರ್ ಆಕ್ರೋಶ

ಗುರುವಾರ, 24 ಆಗಸ್ಟ್ 2017 (13:00 IST)
ರಾಜ್ಯದಲ್ಲಿ ಪ್ರಾಮಾಣಿಕ ಅಧಿಕಾರಿಗಳಿಗೆ ಬೆಲೆಯಿಲ್ಲ. ಭ್ರಷ್ಟರಿಗೆ ಮಾತ್ರ ಮಣೆಹಾಕಲಾಗುತ್ತಿದೆ ಎಂದು ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಬಿಎಂಪಿ ಜಾಹೀರಾತು ವಿಭಾಗದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ ಹೊರಹಾಕಿದ್ದರಿಂದ ಮಥಾಯಿ ಅವರಿಗೆ ಕಿರುಕುಳ ನೀಡಲಾಗುತ್ತಿದೆ. ಅವರಿಗೆ ನೀಡಿದ್ದ ಸರಕಾರಿ ವಾಹನವನ್ನು ಹಿಂಪಡೆಯಲಾಗಿದೆ ಎಂದು ಆರೋಪಿಸಿದರು.
 
ಬಿಬಿಎಂಪಿ ಜಾಹೀರಾತು ವಿಭಾಗದಲ್ಲಿ ಸಾವಿರಾರು ಕೋಟಿ ರೂಪಾಯಿಗಳ ಅವ್ಯವಹಾರವಾಗಿದೆ. ಮಥಾಯಿ ಅವ್ಯವಹಾರವನ್ನು ಬಹಿರಂಗಪಡಿಸಿದ ಕೂಡಲೇ ಅವರನ್ನು ಎತ್ತಂಗಡಿ ಮಾಡಲಾಯಿತು. ಇಂತಹ ಭ್ರಷ್ಟ ಸರಕಾರ ಯಾವತ್ತೂ ನೋಡಿಲ್ಲ ಎಂದು ಗುಡುಗಿದರು.
 
ಸರಕಾರದ ವಿರುದ್ಧ ಪ್ರಾಮಾಣಿಕ ಅಧಿಕಾರಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪ್ರಾಮಾಣಿಕ ಅಧಿಕಾರಿಗಳಿಗೆ ದಕ್ಷತೆಯಿಂದ ಕಾರ್ಯನಿರ್ವಹಿಸಲು ಆಗುತ್ತಿಲ್ಲ. ದಕ್ಷತೆಯಿಂದ ಕಾರ್ಯನಿರ್ವಹಿಸಿದಲ್ಲಿ ಅವರ ವಿರುದ್ಧ ಸಂಚು ರೂಪಿಸಲಾಗುತ್ತಿದೆ ಎಂದು ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಕಿಡಿಕಾರಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ