ಫೋನ್ ಕದ್ದಾಲಿಕೆ ಆರೋಪ: ಆರ್‌ ಅಶೋಕ್‌ಗೆ ದೂರು ದಾಖಲಿಸುವಂತೆ ಡಿಕೆಶಿ ಸೂಚನೆ

Sampriya

ಸೋಮವಾರ, 24 ಮಾರ್ಚ್ 2025 (20:41 IST)
ಬೆಂಗಳೂರು: ಹನಿಟ್ರ್ಯಾಪ್‌ ವಿವಾದದ ಮಧ್ಯೆ ವಿಪಕ್ಷ ನಾಯಕ ಆರ್ ಅಶೋಕ್‌ ಅವರು ಇದೀಗ ತಮ್ಮ ಫೋನ್‌ ಕದ್ದಾಲಿಕೆ ಆಗುತ್ತಿದೆ ಹೊಸ ಬಾಂಬ್ ಸಿಡಿಸಿದ್ದಾರೆ.  ಇನ್ನು ಈ ಆರೋಪಕ್ಕೆ ಪ್ರತಿಕ್ರಿಯಿಸಿದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು, ಪೊಲೀಸ್‌ ದೂರು ದಾಖಲಿಸುವಂತೆ ಅಶೋಕ್ ಅವರಿಗೆ ಸಲಹೆ ನೀಡಿದರು.

ಆರ್. ಅಶೋಕ್ ಅವರು ಕಾಂಗ್ರೆಸ್ ಸರ್ಕಾರ, ತನ್ನ ಸಚಿವರು ಮತ್ತು ಆಡಳಿತ ಪಕ್ಷದ ಶಾಸಕರು ಸೇರಿದಂತೆ ಪ್ರಮುಖ ರಾಜ್ಯ ನಾಯಕರ ಫೋನ್‌ಗಳನ್ನು "ಟ್ಯಾಪ್" ಮಾಡುತ್ತಿದೆ ಎಂದು ಸೋಮವಾರ ಆರೋಪಿಸಿದ್ದಾರೆ.

ರಾಜ್ಯ ಸರ್ಕಾರ ತನ್ನ ಆಂತರಿಕ ವಿರೋಧಿಗಳು ಮತ್ತು ವಿರೋಧ ಪಕ್ಷಗಳನ್ನು ನಿಯಂತ್ರಿಸಲು ಫೋನ್ ಕದ್ದಾಲಿಕೆ ಮಾಡುತ್ತಿದೆ ಎಂದು ಬಿಜೆಪಿ ನಾಯಕ ಆರೋಪಿಸಿದ್ದಾರೆ. ಅಲ್ಲದೆ ಇದನ್ನು ಹಲವಾರು ಆಡಳಿತ ಪಕ್ಷದ ಶಾಸಕರು ಸಹ ಒಪ್ಪಿಕೊಂಡಿದ್ದಾರೆ ಎಂದು ಹೇಳಿದ್ದಾರೆ.

ಏತನ್ಮಧ್ಯೆ, ರಾಜ್ಯ ಗೃಹ ಸಚಿವ ಜಿ ಪರಮೇಶ್ವರ ಅವರು, ಫೋನ್ ಕದ್ದಾಲಿಕೆ ಸಂಬಂಧ ಇದುವರೆಗೆ ಯಾವುದೇ ದೂರುಗಳನ್ನು ಸ್ವೀಕರಿಸಿಲ್ಲ ಎಂದು ಹೇಳಿದ್ದಾರೆ.

ನಮಗೆ ಇನ್ನೂ ಯಾವುದೇ ದೂರು ಬಂದಿಲ್ಲ. ನಮಗೆ ಒಂದು ದೂರು ಬಂದರೆ ನಾವು ತಕ್ಷಣ ಕ್ರಮ ಕೈಗೊಳ್ಳುತ್ತೇವೆ. ನೀವು ಈ ವಿಷಯವನ್ನು ಎತ್ತಿದ ನಂತರ, ನಾನು ಅದನ್ನು ಪರಿಶೀಲಿಸಿದ್ದೇನೆ. ಆದರೆ ಇಲ್ಲಿಯವರೆಗೆ, ಯಾವುದೇ ಪೊಲೀಸ್ ಠಾಣೆಯಲ್ಲಿ ಅಂತಹ ದೂರು ಬಂದಿಲ್ಲ ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ