ನನ್ನ ಮೇಲೆ ಹನಿಟ್ರ್ಯಾಪ್‌ಗೆ ಯತ್ನ: ಸದನದಲ್ಲಿ ಹೊಸ ಬಾಂಬ್ ಸಿಡಿಸಿದ ಕೆಎನ್‌ ರಾಜಣ್ಣ

Sampriya

ಗುರುವಾರ, 20 ಮಾರ್ಚ್ 2025 (18:47 IST)
Photo Courtesy X
ಬೆಂಗಳೂರು: ರಾಜ್ಯದ 48 ರಾಜಕೀಯ ಮುಖಂಡರ ಸಿಡಿ, ಪೆನ್‌ಡ್ರೈವ್‌ ತಯಾರಾಗಿದೆ. ನನ್ನ ಮೇಲೂ ಹನಿಟ್ರ್ಯಾಪ್‌ ಯತ್ನ ನಡೆದಿದೆ ಎನ್ನುವ ಮೂಲಕ ಸಹಕಾರಿ ಸಚಿವ ಕೆ ಎನ್ ರಾಜಣ್ಣ ಹೊಸ ಬಾಂಬ್ ಸಿಡಿಸಿದ್ದಾರೆ.

ವಿಧಾನಸಭೆಯಲ್ಲಿ ಗುರುವಾರ ಮಾತನಾಡಿದ ಅವರು, ಈ ಸಂಬಂಧ ದೂರು ನೀಡಲಿದ್ದು, ಗೃಹ ಸಚಿವರು ಇದರ ಬಗ್ಗೆ ತನಿಖೆ ನಡೆಸಬೇಕೆಂದು ಮನವಿ ಮಾಡಿದರು.

ಬಜೆಟ್ ಭಾಷಣದ ಮೇಲಿನ ಚರ್ಚೆಯ ಸಂದರ್ಭದಲ್ಲಿ ಯತ್ನಾಳ್ ಅವರು ವಿಚಾರ ಪ್ರಸ್ತಾಪಿಸಿ,  ರಾಜ್ಯದಲ್ಲಿ ಸಹಕಾರಿ ಸಚಿವರ ಮೇಲೆ ಹನಿಟ್ರ್ಯಾಪ್ ಮಾಡುವ ಪ್ರಯತ್ನ ಮಾಡಲಾಗಿದೆ. ಇದೊಂದು ಕೆಟ್ಟ ಸಂಸ್ಕೃತಿ. ಜನ ಪ್ರತಿನಿಧಿಗಳನ್ನು ಬ್ಲ್ಯಾಕ್ ಮೇಲ್ ಮಾಡುತ್ತಿದ್ದಾರೆ ಎಂದು ಪ್ರಸ್ತಾಪಿಸಿದರು.

ಕೆಲವರು ತಮ್ಮ ಹಾಗೂ ತಮ್ಮ ಕುಟುಂಬದ ಭವಿಷ್ಯದ ಸಲುವಾಗಿ, ತಾವು ಮುಂದಿನ ಸಿಎಂ ಆಗಲು ಹನಿಟ್ರ‍್ಯಾಪ್ ಮಾಡ್ತಿದ್ದಾರೆ. ಈಗ ರಾಜಣ್ಣ ಮೇಲೆ ನಾಳೆ ಮತ್ತೊಬ್ಬರ ಮೇಲೆ ಆಗುತ್ತೆ ಅಂತ ಪ್ರಸ್ತಾಪಿಸಿದ್ರು. ಈ ವೇಳೆ ಎದ್ದು ನಿಂತ ಸಚಿವ ಕೆ.ಎನ್ ರಾಜಣ್ಣ, ಹನಿಟ್ರ‍್ಯಾಪ್ ಆರೋಪದ ಬಗ್ಗೆ ಸ್ಪಷ್ಟೀಕರಣ ಕೊಟ್ರು. ಯತ್ನಾಳ್ ನನ್ನ ಹೆಸರು ಪ್ರಸ್ತಾಪ ಮಾಡಿದ್ದಾರೆ ಅಂತ ಮಾತು ಶುರು ಮಾಡಿದರು.



ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ