ಹನಿಟ್ರ್ಯಾಪ್ ಸುಂದರಿ ಖಾಕಿ ಬಲೆಗೆ
ಬೆಂಗಳೂರಿನ ಪುಟ್ಟೇನಹಳ್ಳಿಯಲ್ಲಿ ವ್ಯಕ್ತಿಯೊಬ್ಬರನ್ನು ಹನಿಟ್ರ್ಯಾಪ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈ ಮೂಲದ ಖತರ್ನಾಕ್ ಮಾಡೆಲ್ ಒಬ್ಬಳನ್ನು ಪುಟ್ಟೇನಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಬಂಧಿತಳನ್ನು ನೇಹಾ ಅಲಿಯಾಸ್ ಮೆಹರ್ ಎಂದು ಗುರುತಿಸಲಾಗಿದೆ. ಈಕೆಯನ್ನು ಮುಂಬೈನಲ್ಲಿ ಬಂಧಿಸಿದ ಪುಟ್ಟೇನಹಳ್ಳಿ ಪೊಲೀಸರು ಬೆಂಗಳೂರಿಗೆ ಕರೆತಂದಿದ್ದಾರೆ. ಈ ಮೊದಲು ಇದೇ ಪ್ರಕರಣದಲ್ಲಿ ಆರೋಪಿಗಳಾದ ಶರಣ ಪ್ರಕಾಶ ಬಳಿಗೇರ, ಅಬ್ದುಲ್ ಖಾದರ್, ಯಾಸಿನ್ ಎಂಬುವವರನ್ನು ಬಂಧಿಸಲಾಗಿದೆ. ಹನಿಟ್ರ್ಯಾಪ್ ಜಾಲಕ್ಕೆ ಕೆಡವಲು ಆರೋಪಿಗಳು ಕತ್ನಾ ಅಸ್ತ್ರ ಪ್ರಯೋಗ ಮಾಡುತ್ತಿದ್ದರು. ಬಾಂಬೆ ಮಾಡೆಲ್ ಇಟ್ಟುಕೊಂಡು ಆರೋಪಿಗಳು ಮಿಕಗಳಿಗೆ ಬಲೆ ಬೀಸುತ್ತಿದ್ದರು ಎಂದು ತಿಳಿದುಬಂದಿದೆ.