ಸಾಲುಮರದ ತಿಮ್ಮಕ್ಕ, ಚನ್ನವೀರ ಕಣವಿ, ಎಸ್.ಎಲ್.ಭೈರಪ್ಪರಿಗೆ ಗೌರವ ಡಾಕ್ಟರೇಟ್

ಸೋಮವಾರ, 21 ಸೆಪ್ಟಂಬರ್ 2020 (21:47 IST)
ಕನ್ನಡದ ಖ್ಯಾತ ಕಾದಂಬರಿಕಾರ ಎಸ್.ಎಲ್. ಭೈರಪ್ಪ, ಕವಿ ಚನ್ನವೀರ್ ಕಣವಿ, ಪರಿಸರವಾದಿ ಮತ್ತು ಸಾಮಾಜಿಕ ಕಾರ್ಯಕರ್ತೆ ಸಾಲುಮರದ ತಿಮ್ಮಕ್ಕಗೆ ಗೌರವ ಡಾಕ್ಟರೇಟ್ ಪ್ರಕಟಿಸಲಾಗಿದೆ.

ಕಲಬುರಗಿ ಜಿಲ್ಲೆಯ ಆಳಂದ ತಾಲ್ಲೂಕಿನ ಕಡಗಂಚಿ ಹತ್ತಿರದಲ್ಲಿರುವ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ 5ನೇ ಘಟಿಕೋತ್ಸವ ಸೆ. 23ರಂದು ಬೆಳಿಗ್ಗೆ 11 ಗಂಟೆಗೆ ವರ್ಚುವಲ್ ಮೋಡ್‍ನಲ್ಲಿ ನಿಗದಿಪಡಿಸಲಾಗಿದೆ ಎಂದು ಕುಲಪತಿ ಪ್ರೊ. ಎಚ್.ಎಂ. ಮಹೇಶ್ವರಯ್ಯ ತಿಳಿಸಿದ್ದಾರೆ.

ವಿಶ್ವವಿದ್ಯಾಲಯ ಧನಸಹಾಯ ಆಯೋಗದ ಅಧ್ಯಕ್ಷ ಪ್ರೊ. ಡಿ.ಪಿ. ಸಿಂಗ್ ಅವರು ಆನ್‍ಲೈನ್ ಮೂಲಕ ಘಟಿಕೋತ್ಸವ ಭಾಷಣ ಮಾಡಲಿದ್ದಾರೆ.

ಜಾನಪದ ಲೇಖಕ ಮತ್ತು ಬರಹಗಾರ ಎಂ.ಜಿ. ಬಿರಾದಾರ್, ಕನ್ನಡದ ಖ್ಯಾತ ಕಾದಂಬರಿಕಾರ ಎಸ್.ಎಲ್. ಭೈರಪ್ಪ, ಕವಿ ಚನ್ನವೀರ್ ಕಣವಿ, ಪರಿಸರವಾದಿ ಮತ್ತು ಸಾಮಾಜಿಕ ಕಾರ್ಯಕರ್ತೆ ಸಾಲುಮರದ ತಿಮ್ಮಕ್ಕ ಮತ್ತು ಬಾಹ್ಯಾಕಾಶ ವಿಜ್ಞಾನಿ ಕೆ. ಶಿವನ್ ಅವರಿಗೆ ಗೌರವ ಡಾಕ್ಟರೇಟ್ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ.


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ