ಕನ್ಯೆ ನೋಡಿ ವಾಪಾಸ್ಸಾಗುತ್ತಿದ್ದ ವೇಳೆ ಭೀಕರ ಅಪಘಾತ: ಕಾರಿನಲ್ಲಿದ್ದ ಐವರು ಸಾವು

Sampriya

ಶುಕ್ರವಾರ, 6 ಡಿಸೆಂಬರ್ 2024 (19:48 IST)
Photo Courtesy X
ವಿಜಯಪುರ: ತಾಳಿಕೋಟೆ ತಾಲ್ಲೂಕಿನ ಬಿಳೆಬಾವಿ ಕ್ರಾಸ್ ಬಳಿ ಕಾರು ಹಾಗೂ ತೊಗರಿ ಕಟಾವು ಮಾಡುವ ಯಂತ್ರದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಐವರು ಸಾವನ್ನಪ್ಪಿರುವ ಘಟನೆ ಇಂದು ಸಂಜೆ ನಡೆದಿದೆ.

ಅಪಘಾತದ ಭೀಕರತೆಗೆ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಕಾರಿಗೆ ತೊಗರಿ ಕಟಾವು ಮಷಿನ್​ ಡಿಕ್ಕಿಯಾಗಿ ಕಾರಿನಲ್ಲಿದ್ದ ಇಬ್ಬರು ಮಹಿಳೆಯರು, ಮೂವರು ಪುರುಷರು ಸಾವನ್ನಪ್ಪಿದ್ದಾರೆ. ಮೃತರು ವಿಜಯಪುರ ತಾಲೂಕು ಅಲಿಯಾಬಾದ್ ನಿವಾಸಿಗಳಾಗಿದ್ದಾರೆ. ನಿಂಗಪ್ಪಾ ಪಾಟೀಲ್ (55), ಶಾಂತವ್ವ ಶಂಕರ ಪಾಟೀಲ್ (45), ಭೀಮಶಿ ಸಂಕನಾಳ (65), ಶಶಿಕಲಾ ಜೈನಾಪೂರ (50) ಹಾಗೂ ದಿಲೀಪ್ ಪಾಟೀಲ್ (45) ಮೃತರು.


ಮೃತರಾದ ಐವರು ಯಾದಗಿರಿ ಜಿಲ್ಲೆಯ ಅಗ್ನಿ ಗ್ರಾಮದಲ್ಲಿ ಕನ್ಯೆ ನೋಡಲು ಹೋಗಿದ್ದು, ವಾಪಸ್ ಆಗುತ್ತಿದ್ದ ವೇಳೆ ದುರಂತ ಸಂಭವಿಸಿದೆ.

ಕ್ರೂಸರ್ ಓವರ್ ಟೇಕ್ ಮಾಡುವ ಭರದಲ್ಲಿ ತೊಗರಿ ಕಟಾವು ಮಷಿನ್​​ಗೆ ಕಾರು ಮುಖಾಮುಖಿ ಡಿಕ್ಕಿಯಾಗಿದೆ. ಅಪಘಾತದಿಂದಾಗಿ ಘಟನಾ ಸ್ಥಳದಲ್ಲಿ ಟ್ರಾಫಿಕ್‌ಜಾಮ್​ ಉಂಟಾಗಿತ್ತು. ತಾಳಿಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ