ಮಹಾರಾಷ್ಟ್ರದ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಭೀಕರ ಅಪಘಾತ; 6 ಮಂದಿ ದುರ್ಮರಣ

ಗುರುವಾರ, 12 ಸೆಪ್ಟಂಬರ್ 2019 (11:13 IST)
ಮುಂಬೈ : ಮಹಾರಾಷ್ಟ್ರದ ಸಾತಾರಾ ನಗರದ  ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಭೀಕರ ಅಪಘಾತ ಸಂಭವಿಸಿದ್ದು, 6 ಮಂದಿ ಪ್ರಯಾಣಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.ಮುಂಬೈ ನಗರದಿಂದ ಬೆಳಗಾವಿಗೆ ಬರುತ್ತಿದ್ದ ಎಸ್‍ಆರ್‍ಎಸ್ ಖಾಸಗಿ ಬಸ್ ಚಾಲಕನ ನಿರ್ಲಕ್ಷದಿಂದ ಮುಂದೆ ಸಾಗುತ್ತಿದ್ದ ಲಾರಿ ಹಿಂಭಾಗಕ್ಕೆ ಬಸ್ ಡಿಕ್ಕಿ ಹೊಡೆದಿದೆ. ಪರಿಣಾಮ ಬಸ್ಸಿನ ಮುಂಭಾಗ ಜಖಂಗೊಂಡಿದ್ದು, ಸ್ಥಳದಲ್ಲೇ 6 ಮಂದಿ ಮೃತಪಟ್ಟಿದ್ದು, 20 ಪ್ರಯಾಣಿಕರ ಸ್ಥಿತಿ ಗಂಭೀರವಾಗಿದೆ.

 

ಮೃತರು ಬೆಳಗಾವಿ ಮೂಲದವರು ಎಂದು ತಿಳಿದುಬಂದಿದೆ. ಸದ್ಯ ಸ್ಥಳಕ್ಕೆ ಪೊಲೀಸರು ಭೇಟಿ ಕೊಟ್ಟು ಪರಿಶೀಲನೆ ನಡೆಸಿದ್ದು, ಗಾಯಗೊಂಡ ಪ್ರಯಾಣಿಕರನ್ನು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ