ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕೇಂದ್ರ ಸಚಿವ ಸದಾನಂದ ಗೌಡ, ನಾವು ಆಪರೇಶನ್ ಕಮಲ ಮಾಡಿದ್ದಕ್ಕೆ ಪಶ್ಚಾತಾಪ ಪಟ್ಟಿದ್ದೇವೆ. ಆದರೆ, ಕಾಂಗ್ರೆಸ್ ಪಕ್ಷದಂತೆ ಚೀಲದ ತುಂಬಾ ದುಡ್ಡು ತಂದು ಒಬ್ಬ ಶಾಸಕರಿಗೆ ಇಷ್ಟು ಎಂದು ರೆಟ್ ಫಿಕ್ಸ್ ಮಾಡಿಲ್ಲ. ಚುನಾವಣೆಯಲ್ಲಿ ಕುದುರೆ ವ್ಯಾಪಾರ, ರೆಸಾರ್ಟ್ ರಾಜಕಾರಣವೇ ರಾಜ್ಯಕ್ಕೆ ಕಾಂಗ್ರೆಸ್ ಪಕ್ಷದ ಕೊಡುಗೆ. ಚುನಾವಣೆಯಲ್ಲಿ ಕಾಂಗ್ರೆಸ್ ಏನು ಮಾಡಿಲ್ಲ ಹೇಳಿ ಎಂದು ರಾಜ್ಯಸರಕಾರದ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.
ವೋಟಿಗಾಗಿ ನೋಟು ಪ್ರಕರಣದಲ್ಲಿ ಭಾಗಿಯಾಗಿರುವ ಶಾಸಕರನ್ನು ಚುನಾವಣೆಯಿಂದ ದೂರವಿಡಿ ಎಂದು ರಾಜ್ಯ ಚುನಾವಣೆಗೆ ಮನವಿ ಮಾಡಿರುವ ಸದಾನಂದ ಗೌಡರು, ರಾಜ್ಯಸಭೆ ಚುನಾವಣೆಗೆ ಕೇಂದ್ರ ಸರಕಾರ ಹೊಸ ಕಾನೂನನ್ನು ಜಾರಿಗೆ ತರುತ್ತಿದೆ. ಶಾಸಕರು ಸೂಚಿತರಿಗೆ ತೋರಿಸಿ ಮತ ಚಲಾಯಿಸುವ ಕಾನೂನನ್ನು ಜಾರಿಗೆ ತರುತ್ತಿದ್ದೇವೆ. ಈ ಕುರಿತು 6 ರಾಜ್ಯದ ಮುಖ್ಯಮಂತ್ರಿಯವರಿಗೆ ಪತ್ರ ಬರೆದಿದ್ದೇವೆ ಎಂದು ಹೇಳಿದ್ದಾರೆ.