ಉಡುಪಿಯಲ್ಲಿ ಆಸ್ಪತ್ರೆ ಮಾಲೀಕ ಗುಂಡು ಹಾರಿಸಿಕೊಂಡು ಆತ್ಮಹತ್ಯೆ

ಗುರುವಾರ, 26 ಮೇ 2022 (16:47 IST)
ಕುಂದಾಪುರದ ಚಿನ್ಮಯಿ ಆಸ್ಪತ್ರೆ ಮಾಲೀಕ ಕಟ್ಟೆ ಭೋಜಣ್ಣ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಡುಪಿಯಲ್ಲಿ ನಡೆದಿದೆ.
೮೦ ವರ್ಷದ ಕಟ್ಟೆ ಭೋಜಣ್ಣ ರಿವಾಲ್ವರ್‌ ನಿಂದ ಶೂಟ್‌ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೋಟೇಶ್ವರದ ಮೋಳಹಳ್ಳಿ ಗಣೇಶ್‌ ಶೆಟ್ಟಿ ಬೆಂಗಳೂರಿನಲ್ಲಿ ಹಲವಾರು ಹೋಟೆಲ್‌ ಮಾಲೀಕರೂ ಆಗಿದ್ದಾರೆ.
ಕುಂದಾಪುರದ ಚಿನ್ಮಯಿ ಆಸ್ಪತ್ರೆ, ಉಡುಪಿಯಲ್ಲಿ ಉತ್ತಮ ಹೆಸರು ಹೊಂದಿದ್ದು, ಭೂಮಿ ಮತ್ತು ಹಣಕಾಸಿನ ವ್ಯವಹಾರದ ಹಿನ್ನೆಲೆಯಲ್ಲಿ ಭೋಜಣ್ಣ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಸ್ಥಳಕ್ಕೆ ಕುಂದಾಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ