ಬಾಡೂಟ ರಾಜಕೀಯಕ್ಕೆ ಬಿಸಿ- ನೀತಿ ಸಂಹಿತೆ ಉಲ್ಲಂಘನೆ ಅಡಿ ಕೇಸ್

ಶನಿವಾರ, 18 ಮಾರ್ಚ್ 2023 (08:27 IST)
ಬೆಳಗಾವಿ : ಚುನಾವಣೆ ಸಮೀಪಿಸುತ್ತಿದಂತೆ ವಿವಿಧ ರಾಜಕೀಯ ಪಕ್ಷಗಳಿಂದ ಯಾವುದಾದರೂ ನೆಪದಲ್ಲಿ ಅಮಿಷಗಳ ಮಹಾಪೂರವೇ ಹರಿದು ಬರುತ್ತಿದೆ. ಅದರಲ್ಲೂ ಈ ಬಾರಿಯ ಚುನಾವಣೆಯಲ್ಲಿ ಬಾಡೂಟಗಳು ಭರ್ಜರಿಯಾಗಿ ಆಯೋಜಿಸಲಾಗುತ್ತಿದೆ.
 
ಇದನ್ನು ಸೂಕ್ಷ್ಮವಾಗಿ ಗಮನಿಸಿದ ಚುನಾವಣಾ ಆಯೋಗ ಬ್ರೇಕ್ ಹಾಕಲು ಮುಂದಾಗಿದೆ. ಮೊದಲ ಆರಂಭವೆಂಬಂತೆ ಕುಂದಾನಗರಿನಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಗೆ ಮುನ್ನವೇ ಒಂದು ಪ್ರಕರಣ ದಾಖಲಿಸಲಾಗಿದೆ.

ರಾಜ್ಯದಲ್ಲಿ ಚುನಾವಣಾ ಕಾವು ರಂಗೇರಿದೆ. ಮೂರು ಪಕ್ಷದ ಟಿಕೆಟ್ ಆಕಾಂಕ್ಷಿಗಳು ಮತದಾರರನ್ನು ಸಳೆಯಲು ಹಬ್ಬ-ಆಚರಣೆ-ಮದುವೆ ನೆಪಗಳಲ್ಲಿ ವಿವಿಧ ವಸ್ತುಗಳ ಅಮಿಷಗಳೂಂದಿಗೆ ಭರ್ಜರಿ ಬಾಡೂಟಗಳ ಆಯೋಜಿಸಲಾಗುತ್ತಿದೆ. ದಕ್ಷಿಣ ಕರ್ನಾಟಕ ಭಾಗದಲ್ಲೇ ಹೇಚ್ಚಾಗಿ ಕಂಡು ಬರುತ್ತಿದ್ದ ಬಾಡೂಟ ಅಮಿಷ ಇದೀಗ ಗಡಿ ಜಿಲ್ಲೆ ಬೆಳಗಾವಿಯಲ್ಲಿ ಹೆಚ್ಚಾಗಿ ಆಯೋಜಿಸಲಾಗುತ್ತಿದೆ.

ಮೊನ್ನೆ ಬೆಂಗಳೂರಿನಲ್ಲಿ ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಹಾಗೂ ಅಧಿಕಾರಿಗಳೂಂದಿಗೆ ಸಭೆ ನಡೆಸಿದ ಕೇಂದ್ರ ಚುನಾವಣಾ ಆಯೋಗ ಆಮಿಷ ನೀಡಿದ್ರೆ ಕಾನೂನು ಕ್ರಮದ ಎಚ್ಚರಿಕೆ ನೀಡಿದ್ರು.

ಹಬ್ಬ-ಹರಿದಿನಗಳ ನೆಪಗಳಲ್ಲಿ ಮತದಾರರರಿಗೆ ಅಮಿಷಗಳ ನೀಡಿದರೆ ಕಾನೂನು ಕ್ರಮ ಕೈಗೊಳ್ಳಲಾಗುದೆಂದು ಎಚ್ಚರಿಕೆ ನೀಡಿದ್ದರು. ಇದರ ಬೆನ್ನಲ್ಲೆ ಚುನಾವಣಾ ನೀತಿ ಸಂಹಿತೆ ಜಾರಿ ಮುನ್ನವೇ ಬೆಳಗಾವಿಯಲ್ಲಿ ಮೊದಲ ಪ್ರಕರಣ ದಾಖಲಾಗಿದೆ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ