ಬಿಸಿಯೂಟ ನೌಕರರು ಈ ಹಿಂದೆ ವಿವಿಧ ಬೇಡಿಕೆಗಳಿಗೆ ಒತ್ತಾಯಿಸಿ ಧರಣಿ ಮಾಡಿದ್ರು.ತಮ್ಮ ಬೇಡಿಕೆ ಈಡೇರದ ಹಿನ್ನೆಲೆ ಬಿಸಿ ಊಟ ಕಾರ್ಯಕರ್ತರು ವಿಧಾನಸೌಧ ಮುತ್ತಿಗೆ ಹಾಕಲು ನಿರ್ಧಾರ ಮಾಡಿಕೊಂಡಿದ್ದಾರೆ.ಈ ಹಿಂದೆ ಫ್ರೀಡಂ ಪಾರ್ಕ್ ನಲ್ಲಿ ಫೆ.13ರಿಂದ ಅನಿರ್ಧಿಷ್ಟಾವಧಿ ಧರಣಿ ನಡೆಸುತ್ತಿದ್ದರೂ ಆಗ ಸರ್ಕಾರದಿಂದ ಯಾವುದೇ ಪ್ರತಿಕ್ರಿಯೆಯಿಲ್ಲ.ಹೀಗಾಗಿ ಇಂದು ಕಾರ್ಯಕರ್ತೆಯರು ವಿಧಾನಸೌದ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ.