ಪತಿಯ ಅನೈತಿಕ ಸಂಬಂಧಕ್ಕೆ ಬೇಸತ್ತು ಪತ್ನಿ ಆತ್ಮಹತ್ಯೆ!

ಭಾನುವಾರ, 15 ಜನವರಿ 2017 (14:08 IST)
ಪತಿಯ ಅನೈತಿಕ ಸಂಬಂಧ ಹಾಗೂ ಮಾನಸಿಕ ಕಿರುಕುಳಕ್ಕೆ ಬೇಸತ್ತು ಪತ್ನಿ ಆತ್ಮಹತ್ಯೆಗೆ ಶರಣಾದ ಘಟನೆ ಮೈಸೂರಿನಲ್ಲಿ ವರದಿಯಾಗಿದೆ.
ಅಂಜಲಿ ನಾಯಕ ನಾಯಕ ಅವರ ಪತಿ ಬೇರೆ ಮಹಿಳೆಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದು, ಇದರಿಂದ ಮಾನಸಿಕ ಖಿನ್ನತೆಗೆ ಒಳಗಾಗಿ ಅಂಜಲಿ ನಾಯಕ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಹೇಳಲಾಗುತ್ತಿದೆ. 
 
ಹೊಸ ವರ್ಷದಂದು ವಿಷ ಸೇವಿಸಿದ್ದ ಅಂಜಲಿಯನ್ನು ಪೋಷಕರು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಇಂದು ಅಂಜಲಿ ನಾಯಕ ಮೃತಪಟ್ಟಿದ್ದಾರೆ. 
 
ಈ ಸಂಬಂಧ ಪತಿ ಅನಿಲ್, ಅತ್ತೆ ಶಶಿಕಲಾ, ಮಾವ ನಾಗರಾಜ್, ಮೈದುನ ಅಜಯ್ ಹಾಗೂ ನೋದರ ಮಾವ ಚಂದ್ರಶೇಖರ್ ವಿರುದ್ಧ ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ