ಮನೆಯಲ್ಲಿ ನೇಣು ಬಿಗಿದುಕೊಂಡು ಗೃಹಿಣಿ ಆತ್ಮಹತ್ಯೆ

ಬುಧವಾರ, 15 ಮೇ 2019 (10:02 IST)
ಬೆಂಗಳೂರು : ಗೃಹಿಣಿಯೊಬ್ಬಳು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ರಾಜರಾಜೇಶ್ವರಿನಗರದಲ್ಲಿ ನಡೆದಿದೆ.




ಮಂಜುಳಾ (27) ಮೃತಪಟ್ಟ ಮಹಿಳೆ. ಈಕೆ ಮೂರು ವರ್ಷಗಳ ಹಿಂದೆ ಗಿರೀಶ್ ಎಂಬವರನ್ನು ಮದುವೆ ಆಗಿದ್ದರು. ಆದರೆ ಮಂಜುಳಾ ನಿನ್ನೆ ರಾತ್ರಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.


ವರದಕ್ಷಿಣೆಗಾಗಿ ಆಕೆಯ ಪತಿ ಗಿರೀಶ್ ಹಾಗೂ ಆಕೆಯ ಮನೆಯವರು ಕೊಲೆ ಮಾಡಿದ್ದಾರೆ ಎಂದು ಮಂಜುಳಾ ಪೋಷಕರು ಆರೋಪಿಸುತ್ತಿದ್ದಾರೆ. ಈ ಬಗ್ಗೆ ರಾಜರಾಜೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮಂಜುಳಾ ಪತಿ ಗಿರೀಶ್ ನನ್ನು ವಶಕ್ಕೆ ಪಡೆದಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ