ಯಡಿಯೂರಪ್ಪ ತಪ್ಪು ಮಾಡಿದ್ರೆ ಬಿಡಲು ಆಗುತ್ತಾ?: ಸಿಎಂ ಸಿದ್ದರಾಮಯ್ಯ

ಸೋಮವಾರ, 21 ಆಗಸ್ಟ್ 2017 (12:10 IST)
ಬೆಂಗಳೂರು: ಅಕ್ರಮ ಡಿನೋಟಿಫಿಕೇಶನ್ ಪ್ರಕರಣದಲ್ಲಿ ಬಿಎಸ್ ಯಡಿಯೂರಪ್ಪ ತಪ್ಪು ಮಾಡಿದ್ದರೆ ಅವರನ್ನು ಸುಮ್ಮನೇ ಬಿಡಲಿಕ್ಕಾಗುತ್ತಾ? ಹೀಗಂತ ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

 
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಯಡಿಯೂರಪ್ಪ ತಪ್ಪು ಮಾಡಿಲ್ಲವೆಂದಾದರೆ ಎಸಿಬಿ ಮುಂದೆ ಕೇಳಲಿ ಎಂದು ಸವಾಲು ಹಾಕಿದ್ದಾರೆ. ಅಲ್ಲದೆ ಈ ಪ್ರಕರಣಕ್ಕೂ ತಮಗೂ ಸಂಬಂಧವಿಲ್ಲಎಂದು ಮತ್ತೊಮ್ಮೆ ಸ್ಪಷ್ಟಪಡಿಸಿದ್ದಾರೆ.

ಕೆಎಎಸ್ ಅಧಿಕಾರಿ ಬಸವರಾಜೇಂದ್ರ ಬಿಎಸ್ ವೈ ವಿರುದ್ಧ ಹೇಳಿಕೆ ನೀಡಲು ಒತ್ತಡ ಹೇರಲಾಗಿತ್ತು ಎಂದು ದೂರಿರುವುದರ ಬಗ್ಗೆ ಪ್ರತಿಕ್ರಿಯಿಸಿದ ಅವರು ಹಾಗಿದ್ದರೆ ಅವರು ತಮ್ಮ ಮೇಲೆ ಹೇರಲಾಗಿರುವ ಒತ್ತಡದ ವಿರುದ್ಧ ದೂರು ನೀಡಲು ಇಷ್ಟು ದಿನ ತೆಗೆದುಕೊಂಡಿದ್ದು ಯಾಕೆ ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ.. ಐಪಿಎಲ್: ರಾಜಸ್ತಾನ್ ರಾಯಲ್ಸ್ ತಂಡದಿಂದ ಬಂದ ಮಹತ್ವದ ಸುದ್ದಿ!
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ