ಕೆಇಆರ್‌ಸಿ ದರ ಪರಿಷ್ಕರಣೆ ಹೇಗೆ ಮಾಡುತ್ತೆ?

ಸೋಮವಾರ, 12 ಜೂನ್ 2023 (06:21 IST)
ಕೆಇಆರ್ಸಿ ದರ ನಿಯಂತ್ರಣ ಅಧಿಸೂಚನೆ 2006 ರ ಪ್ರಕಾರ ಎಲ್ಲಾ ಎಸ್ಕಾಂಗಳೂ ಪ್ರತಿ ವರ್ಷ ನವೆಂಬರ್ ತಿಂಗಳಲ್ಲಿ ವಿದ್ಯುತ್ ದರ ಪರಿಷ್ಕರಣೆಗೆ ಕೆಇಆರ್ಸಿ ಮುಂದೆ ಅರ್ಜಿ ಸಲ್ಲಿಸಬೇಕು.

ಅರ್ಜಿಗೆ ಆಕ್ಷೇಪಣೆಗಳನ್ನು ಆಹ್ವಾನಿಸಿ ಎಸ್ಕಾಂಗಳ ಮನವಿಯನ್ನು ಪರಿಗಣಿಸಿ ಕೆಇಆರ್ಸಿ ಪ್ರತಿ ವರ್ಷ ಮಾರ್ಚ್ ಅಥವಾ ಏಪ್ರಿಲ್ ತಿಂಗಳಲ್ಲಿ ದರ ಪರಿಷ್ಕರಣೆ ಆದೇಶವನ್ನು ನೀಡುತ್ತದೆ. ಇದು ಕೆಇಆರ್ಸಿ ಯ ಸಾಮಾನ್ಯ ನಡವಳಿಯಾಗಿದ್ದು, ಎಸ್ಕಾಂಗಳು ದರ ಪರಿಷ್ಕಣೆಗೆ ಅರ್ಜಿ ಸಲ್ಲಿಸದಿದ್ದ ಪಕ್ಷದಲ್ಲಿ ಕೆಇಆರ್ಸಿ ಸ್ವಯಂಪ್ರೇರಿತವಾಗಿ ವಿದ್ಯುತ್ ದರ ಏರಿಕೆ ಆದೇಶ ನೀಡಲು ಕಾನೂನಿನಲ್ಲಿ ಅವಕಾಶವಿದೆ.

ಈ ವರ್ಷದ ಮಾರ್ಚ್/ ಏಪ್ರಿಲ್ನಲ್ಲಿ ಜಾರಿಗೆ ಬರಬೇಕಿದ್ದ ದರ ಪರಿಷ್ಕರಣೆ ಆದೇಶವನ್ನು ಮಾರ್ಚ್ 29, 2023ರಂದು ಚುನಾವಣೆ ನೀತಿ ಸಂಹಿತೆ ಜಾರಿಗೆ ಬಂದ ಹಿನ್ನೆಲೆಯಲ್ಲಿ ಕೆಇಆರ್ಸಿ ತಡೆ ಹಿಡಿದಿತ್ತು. ಚುನಾವಣೆ ಮುಗಿದ ತಕ್ಷಣ, ಮೇ 12ರಂದು ದರ ಪರಿಷ್ಕರಣೆ ಮಾಡಿ ಏಪ್ರಿಲ್ ನಿಂದ ಪೂರ್ವನ್ವಯವಾಗುವಂತೆ ಜಾರಿಗೊಳಿಸಿ ಕೆಇಆರ್ಸಿ ಆದೇಶ ನೀಡಿತ್ತು.

2022ರ ನವೆಂಬರ್ ನಲ್ಲಿ ವಿದ್ಯುತ್ ದರ ಪರಿಷ್ಕರಣೆಗೆ ನೀಡಿದ್ದ ಮನವಿಯನ್ನು ಪುರಸ್ಕರಿಸಿ ಏಪ್ರಿಲ್ ತಿಂಗಳಿಂದ ಅನ್ವಯವಾಗುವಂತೆ ಪ್ರತಿ ಯೂನಿಟ್ಗೆ 70 ಪೈಸೆ ಯಷ್ಟು ಹೆಚ್ಚಳ ಮಾಡಿದ ಮೊತ್ತವನ್ನು ಜೂನ್ ತಿಂಗಳಲ್ಲಿ ಸಂಗ್ರಹಿಸಲಾಗುತ್ತಿದೆ ಎಂದು ಬೆಸ್ಕಾಂ ಎಂಡಿ ತಿಳಿಸಿದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ