ಮೈಸೂರು: ವಾಲ್ಮೀಕಿ ನಿಗಮದ ಹಗರಣದ ಬಗ್ಗೆ ಪ್ರತಿಕ್ರಿಯಿಸಿದ ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿಟಿ ದೇವೇಗೌಡ ಅವರು, ಈ ಹಗರಣದಲ್ಲಿ ಹಣಕಾಸು ಇಲಾಖೆಯ ನಂಟು ಸ್ಪಷ್ಟವಾಗಿದ್ದು, ಇದರ ನೈತಿಕ ಹೊಣೆ ಹೊತ್ತು ಸಿಎಂ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಬೇಕೆಂದರು.
ವಾಲ್ಮೀಕಿ ನಿಗಮದ ಒಂದು ಬ್ಯಾಂಕ್ ಖಾತೆಯಿಂದ ಇನ್ನೊಂದು ಖಾತೆಗೆ ಕೋಟ್ಯಂತರ ರೂಪಾಯಿ ಹಣ ಅಕ್ರಮವಾಗಿ ವರ್ಗಾವಣೆ ಆಗಿದೆ. ಸಿಎಂ ಸಿದ್ದರಾಮಯ್ಯ ಅವರೇ ಹಣಕಾಸು ಸಚಿವರಾಗಿದ್ದು, ಅವರ ಅನುಮತಿ ಇಲ್ಲದೆಯೇ ವರ್ಗಾವಣೆ ಸಾಧ್ಯವೇ ಎಂದು ಪ್ರಶ್ನಿಸಿದರು.
ಈ ಹಿಂದೆ ನಡೆದ ಟೆಲಿಫೋನ್ ಕದ್ದಾಲಿಕೆ ಪ್ರಕರಣದಲ್ಲಿ ರಾಮಕೃಷ್ಣ ಹೆಗಡೆ, ಮತ್ತೊಂದು ಪ್ರಕರಣದಲ್ಲಿ ಎಸ್. ಬಂಗಾರಪ್ಪ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿ ತನಿಖೆಗೆ ಒಳಗಾಗಿದ್ದರು. ಸಮಾಜವಾದಿ ಹಿನ್ನೆಲೆಯಿಂದ ಬಂದಿರುವ ಸಿದ್ದರಾಮಯ್ಯ ಸಹ ರಾಜೀನಾಮೆ ನೀಡಿ ತನಿಖೆ ಎದುರಿಸಬೇಕು. ಆರೋಪ ಮುಕ್ತರಾದಲ್ಲಿ ಮತ್ತೆ ಮುಖ್ಯಮಂತ್ರಿ ಆಗಲಿ ಎಂದರು.