ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆದ ಲಕ್ಷ್ಮೀ ಹೆಬ್ಬಾಳ್ಕರ್ ಹೆಲ್ತ್ ಕಂಡೀಶನ್ ಹೇಗಿದೆ

Sampriya

ಭಾನುವಾರ, 26 ಜನವರಿ 2025 (10:42 IST)
‌‌
Photo Courtesy X
ಬೆಳಗಾವಿ: ಕಾರು ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಇಂದು  ವಿಜಯಾ ಆಸ್ಪತ್ರೆಯಿಂದ ಬಿಡುಗಡೆಯಾದರು.

ಜ.14ರಂದು ನಸುಕಿನಲ್ಲಿ ನಡೆದ ಅಪಘಾತದಲ್ಲಿ ಸಚಿವೆ ಲಕ್ಷ್ಮೀ ಅವರ ಕಾರು ಚನ್ನಮ್ಮನ ಕಿತ್ತೂರು ತಾಲ್ಲೂಕಿನ ಅಂಬಡಗಟ್ಟಿ ಬಳಿ ಮರಕ್ಕೆ ಡಿಕ್ಕಿ ಹೊಡೆದಿತ್ತು. ಬೆನ್ನು ಮೂಳೆಗೆ ಪೆಟ್ಟಾಗಿದ್ದರಿಂದ ಕಳೆದ 13ದಿನಗಳಿಂದ ಆಸ್ಪತ್ರೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದರು.

ಇದೀಗ ಆರೋಗ್ಯದಲ್ಲಿ ಚೇತರಿಕೆ ಕಂಡ ಹಿನ್ನೆಲೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ.

ನಂತರ ಸುದ್ದಿಗಾರರ ಜತೆ ಮಾತನಾಡಿದ ಅವರು, ಅಪಘಾತದಲ್ಲಿ ಬದುಕಿದ್ದರಿಂದ ಇದು ನನಗೆ ಪುನರ್ಜನ್ಮ.  ಇಂತಹ ಘಟನೆ ನನ್ನ ಹೋರಾಟದ ರಾಜಕೀಯ ಜೀವನದಲ್ಲಿ ನಡೆಯಬಾರದಿತ್ತು.
ಗುಣಮುಖರಾಗುವಂತೆ ಹಾರೈಸಿದ ರಾಜ್ಯದ ಜನರಿಗೆ ಧನ್ಯವಾದ ಅರ್ಪಿಸುತ್ತೇನೆ' ಎಂದರು.

ಆರೋಗ್ಯದ ಬಗ್ಗೆ ಮಾಹಿತಿ ನೀಡಿದ ಅವರು, ವೈದ್ಯರು ಮೂರು ವಾರ ವಿಶ್ರಾಂತಿ ಪಡೆಯುವಂತೆ ಹೇಳಿದ್ದಾರೆ. ಸಚಿವೆಯಾಗಿ ನನಗೂ ಜವಾಬ್ದಾರಿಗಳಿವೆ. ರಾಜ್ಯ ಬಜೆಟ್ ಸಹ ಮಂಡನೆಯಾಗಲಿದೆ. ವೈದ್ಯರ ಸಲಹೆಯಂತೆ ವಿಶ್ರಾಂತಿ ಪಡೆದು ಸಾರ್ವಜನಿಕ ಜೀವನಕ್ಕೆ ವಾಪಾಸ್ಸಾಗುತ್ತೇನೆ ಎಂದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ