ಭ್ರಷ್ಟಚಾರದ ದಾಹಕ್ಕೇ ಇನ್ನೆಷ್ಟು ಜೀವಗಳು ಬಲಿಯಾಗಬೇಕು: ಸಿದ್ದರಾಮಯ್ಯಗೆ ಆರ್‌ ಅಶೋಕ್ ಪ್ರಶ್ನೆ

Sampriya

ಬುಧವಾರ, 7 ಆಗಸ್ಟ್ 2024 (15:25 IST)
Photo Courtesy X
ಬೆಂಗಳೂರು: ಭ್ರಷ್ಟ ಕಾಂಗ್ರೆಸ್ ಕರ್ನಾಟಕ ಸರ್ಕಾರದಲ್ಲಿ ಪ್ರಾಮಾಣಿಕ ಅಧಿಕಾರಿಗಳಿಗೆ ಕಿರುಕುಳ, ಒತ್ತಡ, ಬೆದರಿಕೆ ದಿನೇ ದಿನೇ ಹೆಚ್ಚಾಗುತ್ತಿದ್ದು, ಸಿದ್ದರಾಮಯ್ಯ ಅವರ ಭಷ್ಟಚಾರದ ದಾಹಕ್ಕೆ ಇನ್ನೆಷ್ಟು ಜೀವಗಳು ಬಲಿಯಾಗಬೇಕು ಎಂದು ವಿಪಕ್ಷ ನಾಯಕ ಆರ್‌.ಅಶೋಕ್ ಪ್ರಶ್ನೆ ಮಾಡಿದ್ದಾರೆ.

ಸಾಗರ ಕಾಂಗ್ರೆಸ್ ಶಾಸಕರ ವಿರುದ್ಧ ಸರ್ಕಾರಿ ಅಧಿಕಾರಿಯೊಬ್ಬರು ರಕ್ಷಣೆ ಕೋರಿ ಕೋರ್ಟ್‌ನಲ್ಲಿ ಕಣ್ಣೀರು ಹಾಕಿದ್ದಾರೆ.

ಇದನ್ನು ಮುಂದಿಟ್ಟು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. ‌ಸಾಗರದ ಕೆಪಿಟಿಸಿಎಲ್ ಸಹಾಯಕ ಎಂಜಿನಿಯರ್ ಎಂ.ಜಿ.ಶಾಂತಕುಮಾರ್ ಅವರು ತಮ್ಮ ಜೀವರಕ್ಷಣೆ ಮಾಡುವಂತೆ ನ್ಯಾಯಮೂರ್ತಿಗಳ ಮುಂದೆ ಅಂಗಲಾಚಿರುವ ಹೃದಯ ವಿದ್ರಾವಕ ಘಟನೆ ಸಿಎಂ ಸಿದ್ದರಾಮಯ್ಯ ಸರ್ಕಾರದಲ್ಲಿ ತಾಂಡವವಾಡುತ್ತಿರುವ ಭ್ರಷ್ಟಾಚಾರಕ್ಕೆ ಮತ್ತೊಂದು ನಿದರ್ಶನವಾಗಿದೆ.

ಸಿಎಂ ಸಿದ್ದರಾಮಯ್ಯ ಅವರೇ, ಶಿವಮೊಗ್ಗದಲ್ಲಿ ವಾಲ್ಮೀಕಿ ನಿಗಮದ ಅಧಿಕಾರಿ ಚಂದ್ರಶೇಖರನ್ ಆತ್ಮಹತ್ಯೆಗೆ ಶರಣಾದರು. ಗ್ರಾಮೀಣಾಭಿವೃದ್ಧಿ ಇಲಾಖೆಯ ಲಂಚಕೋರತನಕ್ಕೆ ಬೇಸತ್ತು ದಾವಣಗೆರೆಯ ಗುತ್ತಿಗೆದಾರ ಪಿ.ಸಿ.ಗೌಡರ್ ಆತ್ಮಹತ್ಯೆಗೆ ಶರಣಾದರು. ವರ್ಗಾವಣೆ ದಂಧೆಯ ಒತ್ತಡ, ಕಿರುಕುಳ ತಾಳಲಾರದೆ ಯಾದಗಿರಿ ಪಿಎಸ್ ಐ ಪರಶುರಾಮ್ ಹೃದಯಾಘಾತದಿಂದ ಸಾವನ್ನಪ್ಪಿದರು. ರಾಮನಗರದ ಸಿಸಿಬಿ ಇನ್ಸ್ಪೆಕ್ಟರ್ ತಿಮ್ಮೇಗೌಡ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈಗ ಸಾಗರದ ಕೆಪಿಟಿಸಿಎಲ್ ಸಹಾಯಕ ಎಂಜಿನಿಯರ್ ಶಾಂತಕುಮಾರ್ ಕೋರ್ಟ್ ಮುಂದೆ ಜೀವ ಉಳಿಸಲು ಅಂಗಲಾಚಿದ್ದಾರೆ.

ನಿಮ್ಮ ಭ್ರಷ್ಟಾಚಾರದ ದಾಹ ತೀರಲು ಇನ್ನೆಷ್ಟು ಅಮಾಯಕ ಜೀವಗಳು ಬಲಿಯಾಗಬೇಕು ಸಿಎಂ ಸಿದ್ದರಾಮಯ್ಯ
 ನವರೇ?

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ