ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ನೆರೆ ಸಂತ್ರಸ್ಥರಿಗೆ ನೀಡಿದ ಪರಿಹಾರ ಎಷ್ಟು?

ಭಾನುವಾರ, 18 ಆಗಸ್ಟ್ 2019 (20:44 IST)
ರಾಜ್ಯದ ಗಡಿ ಜಿಲ್ಲೆಗಳು ಹಾಗೂ ಕರಾವಳಿ ಪ್ರದೇಶದಲ್ಲಿ ನೆರೆ ಹಾವಳಿ ವಿಪರೀತವಾಗಿದೆ. ಇದೀಗ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಸಂತ್ರಸ್ಥರಿಗೆ ಪರಿಹಾರ ನಿಧಿ ನೀಡಲಾಗಿದೆ.

ಶ್ರೀ ಕ್ಷೇತ್ರ ಧರ್ಮಸ್ಥಳ ದಿಂದ ರಾಜ್ಯದ ನೆರೆಸಂತ್ರಸ್ಥರ ನಿಧಿಗೆ 25 ಕೋಟಿ ರೂಪಾಯಿ ನೀಡಲಾಗಿದೆ.
ಬೆಳ್ತಂಗಡಿ ತಾಲೂಕಿಗೆ 50 ಲಕ್ಷ ವಿಶೇಷ ಪ್ಯಾಕೇಜ್ ಘೋಷಣೆ ಮಾಡಲಾಗಿದೆ.

ಬೀಡಿನಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಘೋಷಣೆ ಮಾಡಿದ್ದಾರೆ.

ಚೆಕ್ ನ್ನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರಿಗೆ ಹಸ್ತಾಂತರಿಸಿದ್ದಾರೆ ಡಾ. ವೀರೇಂದ್ರ ಹೆಗ್ಗಡೆಯವರು. ಹೇಮಾವತಿ ಹೆಗ್ಗಡೆ, ಎಲ್. ಎಚ್. ಮಂಜುನಾಥ್ ಇದ್ರು.



ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ