ಕೇಂದ್ರ ಸಚಿವ ಡಿ.ವಿ.ಸದಾನಂದಗೌಡರು ಹೊಂದಿರುವ ಆಸ್ತಿ ಎಷ್ಟು ಗೊತ್ತಾ?

ಮಂಗಳವಾರ, 26 ಮಾರ್ಚ್ 2019 (12:58 IST)
ಬೆಂಗಳೂರು : ಲೋಕಸಭೆ ಚುನಾವಣೆಗೆ ಬೆಂಗಳೂರು ಉತ್ತರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಅವರು ತಮ್ಮ ಆಸ್ತಿಯ ವಿವರವನ್ನು ಆಯೋಗಕ್ಕೆ ಸಲ್ಲಿಸಿದ್ದಾರೆ.


ತಮ್ಮ ಕುಟುಂಬದ ಆಸ್ತಿ 20.93 ಕೋಟಿ ಇದೆ ಎಂದು ಆಯೋಗಕ್ಕೆ ಸಲ್ಲಿಸಿರುವ ಪ್ರಮಾಣ ಪತ್ರದಲ್ಲಿ ಡಿ.ವಿ.ಸದಾನಂದ ಗೌಡ ತಿಳಿಸಿದ್ದಾರೆ. 2014 ರ ಲೋಕಸಭಾ ಚುನಾವಣೆ ವೇಳೆ ಚುನಾವಣಾ ಆಯೋಗಕ್ಕೆ ಸಲ್ಲಿಸಿದ್ದ ಆಸ್ತಿ ವಿವರದಲ್ಲಿ 10 ಕೊಟಿ ರೂ.ಗಿಂತ ಹೆಚ್ಚು ಎಂದು ಉಲ್ಲೇಖ ಮಾಡಲಾಗಿತ್ತು. ಈ ಬಾರಿಯ ಆಸ್ತಿ ವಿವರದಲ್ಲಿ 20 ಕೋಟಿ ರೂ. ಗಿಂತ ಹೆಚ್ಚು ಆಸ್ತಿ ಹೊಂದಿರುವುದಾಗಿ ನಮೂದಿಸಿದ್ದಾರೆ.


ಡಿವಿಎಸ್ ಹೆಸರಿನಲ್ಲಿ 2.56 ಕೋಟಿ ಚರಾಸ್ತಿ, ಪತ್ನಿ ಹೆಸರಿನಲ್ಲಿ 76.05 ಲಕ್ಷ ಚರಾಸ್ತಿ ಇದೆ. ಡಿವಿಎಸ್ ಹೆಸರಿನಲ್ಲಿ 15.59 ಕೋಟಿ ಸ್ಥಿರಾಸ್ತಿ ಮತ್ತು ಪತ್ನಿ ಹೆಸರಿನಲ್ಲಿ 2.02 ಕೋಟಿ ಸ್ಥಿರಾಸ್ತಿ ಇದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ