ಗೃಹಜ್ಯೋತಿ ಯೋಜನೆ ಅಡಿ ವಿದ್ಯುತ್ ಬಿಲ್ ಲೆಕ್ಕಾಚಾರ ಹೇಗೆ?

ಶನಿವಾರ, 3 ಜೂನ್ 2023 (13:59 IST)
ಬೆಂಗಳೂರು : ಕರ್ನಾಟಕದಲ್ಲಿ ತಿಂಗಳಿಗೆ 200 ಯೂನಿಟ್ವರೆಗೆ ವಿದ್ಯುತ್ ಅನ್ನು ಉಚಿತವಾಗಿ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಘೋಷಿಸಿದ್ದಾರೆ.

ಸಚಿವ ಸಂಪುಟ ಸಭೆಯ ನಂತರ ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಸಿದ್ದರಾಮಯ್ಯ, ಜುಲೈ 1 ರಿಂದ ಗೃಹ ಜ್ಯೋತಿ ಜಾರಿಯಾಗಲಿದೆ ಎಂದು ತಿಳಿಸಿದ್ದಾರೆ.

12 ತಿಂಗಳ ಸರಾಸರಿ ವಿದ್ಯುತ್ ಬಳಕೆಗೆ ಶೇ 10 ರಷ್ಟು ಹೆಚ್ಚುವರಿ ಯೂನಿಟ್ ಸೇರಿಸಿ ಯೋಜನೆಯ ಪ್ರಯೋಜನ ಒದಗಿಸಲಾಗವುದು. ಈ ರೀತಿ 200 ಯೂನಿಟ್ಗಳವರೆಗಿನ ಬಳಕೆಗೆ ಶುಲ್ಕದ ವಿನಾಯಿತಿ ನೀಡಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

ಜುಲೈ ತಿಂಗಳ ವಿದ್ಯುತ್ ಬಿಲ್ನಿಂದಲೇ ವಿನಾಯಿತಿ ಪ್ರಾರಂಭವಾಗುತ್ತದೆ. ಜುಲೈನಿಂದ ಬಳಕೆಯು ಉಚಿತವಾಗಿರುತ್ತದೆ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ. ಜುಲೈವರೆಗೆ ಯಾವುದೇ ಗ್ರಾಹಕರು ಬಿಲ್ ಬಾಕಿ ಉಳಿಸಿಕೊಂಡಿದ್ದರೆ ಅದನ್ನು ಪಾವತಿಸಬೇಕು ಎಂದು ಅವರು ಹೇಳಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ