ಪುನೀತ್ ರಾಜ್ ಕುಮಾರ್ ಹೆಸರಲ್ಲಿ ಹೃದಯ ಜ್ಯೋತಿ ಯೋಜನೆ- ದಿನೇಶ್ ಗುಂಡೂರಾವ್

geetha

ಗುರುವಾರ, 7 ಮಾರ್ಚ್ 2024 (16:00 IST)
ಬೆಂಗಳೂರು-ಕೆಜಿಎಫ್‌ನ ಸಾರ್ವಜನಿಕರ ಆಸ್ಪತ್ರೆಗೆ ಭೇಟಿ ನೀಡಿ, ೫೦ ಲಕ್ಷ ರೂ.ಗಳ ವೆಚ್ಚದಲ್ಲಿ ಎರಡು ಅತ್ಯಾಧುನಿಕ ಆಂಬುಲೆನ್ಸ್, ಬೆಮಲ್ ಸಿಎಸ್‌ಆರ್ ಯೋಜನೆಯಡಿ ನೀಡಿರುವ ಒಂದು ಸಾವಿರ ಲೀಟರ್ ಆಕ್ಸಿಜನ್ ಪ್ಲಾಂಟ್, ಉಚಿತ ಬ್ಲಾಕ್, ಪಬ್ಲಿಕ್ ಹೆಲ್ತ್ ಲ್ಯಾಬ್, ಅತ್ಯಾಧುನಿಕ ಇಸಿಜಿ ಯಂತ್ರವನ್ನ ದಿನೇಶ್ ಗುಂಡೂರಾವ್ ಉದ್ಘಾಟಿಸಿ ಮಾತನಾಡಿದರು.
 
ನಟ ಪುನೀತ್ ರಾಜಕುಮಾರಗೆ ಹೃದಯಾಘಾತ ಯಾವ ಮಟ್ಟದಲ್ಲಿ ಇತ್ತು ಎಂಬುದು ತಿಳಿಯದೆ ಪುನಿತ್ ರಾಜ್‌ಕುಮಾರ್ ಮೃತಪಟ್ಟಿದ್ದರು. ಈ ಹಿನ್ನಲೆಯುಲ್ಲಿ ಮುಖ್ಯಮಂತ್ರಿ ಪ್ರತಿ ತಾಲೂಕಿನ ಆರೋಗ್ಯ ಕೇಂದ್ರಗಳಲ್ಲಿ ಪುನಿತ್ ರಾಜ್‌ಕುಮಾರ್ ಹೆಸರಿನಲ್ಲಿ ಹೃದಯ ಜ್ಯೋತಿ ಯೋಜನೆ ಪ್ರಾರಂಭಿಸಲಿದ್ದು, ಇನ್ನೊಂದು ವಾರದಲ್ಲಿ ಮುಖ್ಯಮಂತ್ರಿ ಉದ್ಘಾಟಿಸಲಿದ್ದಾರೆ ಎಂದರು.
 
ರಾಜ್ಯದ ಆರೋಗ್ಯ ಕೇಂದ್ರಗಳಲ್ಲಿ ಶೇ.೪೦ರಷ್ಟು ಸಿಬ್ಬಂದಿ ಕೊರತೆಯಿದ್ದು, ಎಲ್ಲ ಸಿಬ್ಬಂದಿಗಳ ನೇಮಕ್ಕೆ ಸರ್ಕಾರ ಮುಂದಾಗಿದೆ, ಕೆಜಿಎಫ್ ಸಾರ್ವಜನಿಕ ಆಸ್ಪತ್ರೆಯಲ್ಲಿ ಕೊರತೆ ಇರುವ ವೈದ್ಯರು, ನರ್ಸ್, ಡಿ ಗ್ರೂಪ್ ನೌಕರರು ಹಾಗೂ ಇತರೆ ಲ್ಯಾಬ್ ಸಿಬಂದಿಯನ್ನು ತ್ವರಿತವಾಗಿ ತುಂಬಲಾಗುವುದೆಂದು ಸಚಿವರು ಭರವಸೆ ನೀಡಿದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ