Hubballi: ಹುಬ್ಬಳ್ಳಿ ಬಾಲಕಿ ರೇಪ್ ಕೇಸ್: ಸಂತ್ರಸ್ತ ಬಾಲಕಿ ಕುಟುಂಬಕ್ಕೆ 10 ಲಕ್ಷ ರೂ. ಪರಿಹಾರ

Krishnaveni K

ಸೋಮವಾರ, 14 ಏಪ್ರಿಲ್ 2025 (10:12 IST)
Photo Credit: X
ಹುಬ್ಬಳ್ಳಿ: ತೀವ್ರ ಸಂಚಲನ ಮೂಡಿಸಿದ್ದ 5 ವರ್ಷದ ಬಾಲಕಿ ಮೇಲಿನ ರೇಪ್ ಆಂಡ್ ಮರ್ಡರ್ ಪ್ರಕರಣದಲ್ಲಿ ಸಂತ್ರಸ್ತ ಬಾಲಕಿ ಕುಟುಂಬಕ್ಕೆ ಸರ್ಕಾರದಿಂದ 10 ಲಕ್ಷ ರೂ. ಪರಿಹಾರ ಘೋಷಣೆಯಾಗಿದೆ.

ಸ್ವತ ಸಿಎಂ ಸಿದ್ದರಾಮಯ್ಯ ಪರಿಹಾರ ನೀಡುವಂತೆ ಸೂಚನೆ ನೀಡಿದ್ದಾರೆ. ಈ ಬಗ್ಗೆ ವಿಧಾನಪರಿಷತ್ ಮುಖ್ಯ ಸಚೇತಕ ಸಲೀಂ ಅಹ್ಮದ್ ಮಾಹಿತಿ ನೀಡಿದ್ದಾರೆ. ಮೃತ ಬಾಲಕಿ ಕುಟುಂಬಸ್ಥರನ್ನು ಭೇಟಿ ಮಾಡಿದ ಬಳಿಕ ಅವರು ಪರಿಹಾರ ಘೋಷಣೆ ಮಾಡಿದ್ದಾರೆ.

ಬಿಹಾರ ಮೂಲದ ಕಾರ್ಮಿಕ ರಿತೇಶ್ ಕುಮಾರ್ ಎಂಬಾತ ಮನೆಯ ಎದುರು ಆಟವಾಡಿಕೊಂಡಿದ್ದ 5 ವರ್ಷದ ಬಾಲಕಿಯನ್ನು ಪುಸಲಾಯಿಸಿ ಕರೆದೊಯ್ದು ಅತ್ಯಾಚಾರವೆಸಗಿ ಬಳಿಕ ಕೊಲೆ ಮಾಡಿದ್ದ. ಬಾಲಕಿಯ ಮೃತದೇಹ ಶೌಚಾಲಯವೊಂದರಲ್ಲಿ ಪತ್ತೆಯಾಗಿತ್ತು.

ಇದರ ಬೆನ್ನಲ್ಲೇ ಸಾರ್ವಜನಿಕರು ಭಾರೀ ಆಕ್ರೋಶ ವ್ಯಕ್ತಪಡಿಸಿದ್ದರು. ಪೊಲೀಸರು ಆರೋಪಿಯ ಬಂಧನಕ್ಕೆ ತೀವ್ರ ಹುಡುಕಾಟ ನಡೆಸಿದ್ದರು. ಅದರಂತೆ ಆರೋಪಿಯನ್ನು ಬಂಧಿಸಲು ಹೋದಾಗ ಆತ ಪೊಲೀಸರ ಮೇಲೆಯೇ ದಾಳಿ ನಡೆಸಿದ್ದ. ಹೀಗಾಗಿ ಪೊಲೀಸರು ಸ್ಥಳದಲ್ಲೇ ಎನ್ ಕೌಂಟರ್ ಮಾಡಿ ಸಾಯಿಸಿದ್ದಾರೆ.

ಪೊಲೀಸರ ಕೆಲಸಕ್ಕೆ ಸಾರ್ವಜನಿಕರು ಶ್ಲಾಘನೆ ವ್ಯಕ್ತವಾಗಿದೆ. ಇದೀಗ ಬಾಲಕಿ ಕುಟುಂಬಕ್ಕೆ 10 ಲಕ್ಷ ರೂ. ಧನ ಸಹಾಯ ಮತ್ತು ಸ್ಲಂ ಬೋರ್ಡ್ ನಿಂದ ಒಂದು ಮನೆ  ನೀಡಲು ತೀರ್ಮಾನಿಸಲಾಗಿದೆ ಎಂದು ಸಲೀಂ ಅಹ್ಮದ್ ಹೇಳಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ