ಹುಬ್ಬಳ್ಳಿ ಧಾರವಾಡ ರಸ್ತೆ : ಸರಕಾರ ಹೇಳಿದ್ದೇನು?

ಶುಕ್ರವಾರ, 24 ಜುಲೈ 2020 (22:43 IST)
ಹುಬ್ಬಳ್ಳಿ- ಧಾರವಾಡ ಜಿಲ್ಲೆಯ ರಸ್ತೆ ಕಾಮಗಾರಿ ಬಗ್ಗೆ ಸರಕಾರ ಖಡಕ್ ಸೂಚನೆ ಕೊಟ್ಟಿದೆ.   

ಹುಬ್ಬಳ್ಳಿ- ಧಾರವಾಡ ಜಿಲ್ಲೆಯು ಉತ್ತರ ಕರ್ನಾಟಕದ ಹೃದಯಭಾಗವಾಗಿದ್ದು, ಈ ಜಿಲ್ಲೆಯ ರಸ್ತೆ  ಅಭಿವೃದ್ಧಿ ಕಾಮಗಾರಿಗಳನ್ನು ಶೀಘ್ರವಾಗಿ ಪೂರ್ಣಗೊಳಿಸುವಂತೆ ಉಪಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ ಹಾಗೂ ಕೇಂದ್ರ ಸಚಿವ ಪ್ರಲ್ಹಾದ  ಜೋಶಿ ಸೂಚಿಸಿದ್ದಾರೆ.

ವಿಧಾನಸೌಧದಲ್ಲಿಂದು ಧಾರವಾಡ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳ ಕುರಿತ ಪ್ರಗತಿ ಪರಿಶೀಲನೆ ನಡೆಸಿದ ಅವರು, ಹುಬ್ಬಳ್ಳಿ-ಧಾರವಾಡ ಬೈಪಾಸ್ ರಸ್ತೆ ಅಭಿವೃದ್ಧಿ, ರಾಷ್ಟ್ರೀಯ ಹೆದಾರಿ ಪ್ರಾಧಿಕಾರ ಅನುಷ್ಠಾನಗೊಳಿಸುತ್ತಿರುವ ಕಾಮಗಾರಿಗಳು, ಸಿಆರ್‍ಎಫ್ ಯೋಜನೆ ಕಾಮಗಾರಿಗಳು, ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳ   ಕುರಿತು ಚರ್ಚಿಸಿದರು.

ವಿವಿಧ ಯೋಜನೆಗಳಡಿ  ರಸ್ತೆಗಳನ್ನು ತ್ವರಿತವಾಗಿ ಅಭಿವೃದ್ಧಿ ಪಡಿಸಿ, ಸಾರ್ವಜನಿಕರಿಗೆ ಸುಗಮ ಸಂಚಾರಕ್ಕೆ  ಅನುಕೂಲಕಲ್ಪಿಸಬೇಕು ಎಂದು ಸೂಚಿಸಿದ ಅವರು, ವಿವಿಧ ತಾಂತ್ರಿಕ ಸಮಸ್ಯೆಗಳ ಕುರಿತು ಚರ್ಚಿಸಿದರು.


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ