ರಾಜ್ಯದಲ್ಲಿ ಭಾರೀ ಚಂಡಮಾರುತ?: ಇಲ್ಲಿರೋರು ಹುಷಾರ್

ಸೋಮವಾರ, 10 ಜೂನ್ 2019 (20:06 IST)
ಅರಬ್ಬಿ ಸಮಯದಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಪರಿಣಾಮ ಸಮುದ್ರ ಹಾಗೂ ಕರಾವಳಿ ತೀರದಲ್ಲಿ ವೇಗವಾದ ಗಾಳಿ ಬೀಸುತ್ತಿದೆ. ಹೀಗಾಗಿ ಜನತೆ ಎಚ್ಚರದಿಂದ ಇರುವಂತೆ ಎಚ್ಚರಿಕೆ ನೀಡಲಾಗಿದೆ.

ಈ ಗಾಳಿ ಇನ್ನಷ್ಟು ವೇಗ ಪಡೆದು ಚಂಡಮಾರುತದ ಸ್ವರೂಪ ಪಡೆಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. 

ಈ ಹಿನ್ನೆಲೆಯಲ್ಲಿ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ,  ಉಡುಪಿ ಯಲ್ಲಿ ಜಿಲ್ಲಾಡಳಿತವು ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದೆ. ಸಮುದ್ರಕ್ಕೆ ಇಳಿಯಬಾರದು ಹಾಗೂ ಸಮುದ್ರ ತೀರಕ್ಕೆ ಹೋಗದಂತೆ ಎಚ್ಚರಿಕೆ ನೀಡಿದೆ.

ಅರಬಿ ಸಮುದ್ರದಲ್ಲಿ ವಾಯು ಭಾರ ಕುಸಿತ ಹಾಗೂ ಮುಂಗಾರು ಪ್ರವೇಶದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  ಭಾರಿ ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ ತುರ್ತು ಸೇವೆಗೆ ಟೋಲ್‌ಫ್ರೀ ಸಂಖ್ಯೆ 1077 ಸಂಪರ್ಕಿಸಬಹುದಾಗಿದೆ.

ಇದು ದಿನದ 24 ತಾಸುಗಳ ಕಾಲವೂ ಕಾರ್ಯಾಚರಿಸಲಿದೆ. ಇದಲ್ಲದೆ ವಾಟ್ಸ್‌ಆ್ಯಪ್‌ ಸಂಖ್ಯೆ 9483908000 ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ