ಟ್ರಾಫಿಕ್‌ ಫೈನ್‌ ಆಫರ್‌ಗೆ ರಾಜಧಾನಿಯಲ್ಲಿ ಭರ್ಜರಿ ರೆಸ್ಪಾನ್ಸ್‌: ಮೊದಲ ದಿನ ವಸೂಲಿಯಾದ ದಂಡವೆಷ್ಟು ಗೊತ್ತಾ

Sampriya

ಭಾನುವಾರ, 24 ಆಗಸ್ಟ್ 2025 (09:54 IST)
Photo Credit X
ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಟ್ರಾಫಿಕ್‌ ಫೈನಲ್‌ ಆಫರ್‌ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಸಂಚಾರ ನಿಯಮ ಉಲ್ಲಂಘನೆಯ ಪ್ರಕರಣಗಳಲ್ಲಿ ಬಾಕಿ ಇರುವ ದಂಡ ಪಾವತಿಗೆ ಶೇ.50 ರಷ್ಟು ರಿಯಾಯಿತಿಯನ್ನು ಪೊಲೀಸ್ ಇಲಾಖೆ ಘೋಷಿಸಿತ್ತು. 

ಮೊದಲ ದಿನವೇ ರಾಜಧಾನಿಯಲ್ಲಿ ವಾಹನ ಸವಾರರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ. ಒಂದೇ ದಿನದಲ್ಲಿ 1.48 ಲಕ್ಷ ಪ್ರಕರಣಗಳು ವಿಲೇವಾರಿಯಾಗಿದೆ. ಇದರಲ್ಲಿ ₹ 4.18 ಕೋಟಿ ದಂಡ ವಸೂಲಿ ಆಗಿದೆ. 

ಸಂಚಾರ ನಿಯಮ ಉಲ್ಲಂಘನೆಯ ಹಳೇ ಪ್ರಕರಣಗಳಲ್ಲಿ ದಂಡ ಪಾವತಿಸಿ ಇತ್ಯರ್ಥಪಡಿಸಿಕೊಳ್ಳಲು ಸೆ.19 ವರೆಗೆ ದಂಡ ಪಾವತಿಗೆ ಸರ್ಕಾರ ಶೇ,50 ರಷ್ಟು ರಿಯಾಯಿತಿ ನೀಡಿದೆ.
ಈ ರಿಯಾಯಿತಿ ಅವಧಿ ಶನಿವಾರದಿಂದ ಆರಂಭವಾಗಿದ್ದು, ಮೊದಲ ದಿನವೇ ಜನರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. 

ದಂಡ ಪಾವತಿಗೆ ನಾಗರಿಕರಿಗೆ ಪೊಲೀಸರು ಅವಕಾಶ ಕಲ್ಪಿಸಿದ್ದು, ಕರ್ನಾಟಕ ಸ್ಟೇಟ್ ಪೊಲೀಸ್ (ಕೆಎಸ್‌ಪಿ) ಆ್ಯಪ್, ಬೆಂಗಳೂರು ಪೊಲೀಸರ ಬಿಟಿಪಿ ಆಸ್ಲಂ ಆ್ಯಪ್, ಕರ್ನಾಟಕ ಒನ್/ಬೆಂಗಳೂರು ಒನ್ ವೆಬ್ ಸೈಟ್‌ನಲ್ಲಿ ದಂಡ ಪಾವತಿಸಬಹುದು. ಅಲ್ಲದೆ, ಸ್ಥಳೀಯ ಸಂಚಾರ ಠಾಣೆ ಹಾಗೂ ಸಂಚಾರ ನಿರ್ವಹಣಾ ಕೇಂದ್ರ (ಟಿಎಂಸಿದಲ್ಲಿ ಕೂಡ ವಾಹನ ನೋಂದಣಿ ಸಂಖ್ಯೆ ಪರಿಶೀಲಿಸಿ ಮಾಹಿತಿ ಪಡೆದು, ದಂಡ ಪಾವತಿಸಬಹುದಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ