ಮಾನವೀಯ ಮುಖವುಳ್ಳ ಸರ್ಕಾರ ನಮ್ಮದು- ಸಿ ಎಂ ಕುಮಾರಸ್ವಾಮಿ

ಬುಧವಾರ, 15 ಆಗಸ್ಟ್ 2018 (10:07 IST)
ಬೆಂಗಳೂರು : ದೇಶದ 72 ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಬೆಂಗಳೂರಿನ ಮಾಣಿಕ್ ಷಾ ಮೈದಾನದಲ್ಲಿ ಧ್ವಜಾರೋಹಣ ಮಾಡಿ ಭಾಷಣ ಮಾಡಿದ ಸಿಎಂ ಕುಮಾರಸ್ವಾಮಿ ಅವರು ಮಾನವೀಯ ಮುಖವುಳ್ಳ ಸರ್ಕಾರ ನಮ್ಮದು ಎಂಬುದಾಗಿ ಹೇಳಿದ್ದಾರೆ.


ಮಹಿಳಾ ಸಬಲೀಕರಣ, ಉದ್ಯೋಗ, ಭದ್ರತೆ ನೀಡಲು ಸರ್ಕಾರ ಬದ್ಧವಾಗಿದೆ. ಸರ್ಕಾರಿ ಆಸ್ಪತ್ರೆಗಳ ಅಭಿವೃದ್ಧಿಗೆ ಖಾಸಗಿ ಸಂಸ್ಥೆಗಳ ಸಾಥ್ ನೀಡಲಾಗಿದೆ. ಅಲ್ಪಸಂಖ್ಯಾತ ಸಮುದಾಯಕ್ಕೆ ಸರ್ಕಾರದ ಮೂಲಕ ಸವಲತ್ತು ಕಲ್ಪಿಸಲಾಗಿದೆ. ವಿದ್ಯಾರ್ಥಿನಿಲಯಗಳ ನಿರ್ಮಾಣದ ಮೂಲಕ ವಿದ್ಯಾಭ್ಯಾಸಕ್ಕೆ ಪೂರಕ ವಾತಾವರಣ ಕಲ್ಪಿಸಲಾಗಿದೆ ಎಂದರು.


ಹಾಗೇ ಪಂಚಾಯತ್ ರಾಜ್ ಬಲಪಡಿಸಲು ಸರ್ಕಾರ ಕ್ರಮ ಕೈಗೊಂಡಿದೆ. ಸ್ವಚ್ಛ ಭಾರತ ಯೋಜನೆಯಡಿ ಬಯಲು ಶೌಚ ಮುಕ್ತ ರಾಜ್ಯ ಮಾಡ್ತಿದ್ದೇವೆ. ಬೆಂಗಳೂರಿನ ಸಂಚಾರಿ ದಟ್ಟಣೆ, ವಾಯುಮಾಲಿನ್ಯ ತಡೆಗೆ ಕ್ರಮ ತೆಗೆದುಕೊಳ್ಳಲಾಗಿದೆ ಎಂದರು.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ