ಮಹದೇಶ್ವರ ಬೆಟ್ಟದಲ್ಲಿ ಹುಂಡಿ ಎಣಿಕೆ

ಶನಿವಾರ, 5 ನವೆಂಬರ್ 2022 (13:41 IST)
ಚಾಮರಾಜನಗರ : ಪ್ರಸಿದ್ಧ ಯಾತ್ರಾಸ್ಥಳ ಮಲೆಮಹದೇಶ್ವರ ಸ್ವಾಮಿ ದೇವಾಲಯ ಹುಂಡಿಯಲ್ಲಿ 2.50 ಕೋಟಿ ರೂಪಾಯಿ ಕಾಣಿಕೆ ರೂಪದಲ್ಲಿ ಸಂಗ್ರಹವಾಗಿದೆ.

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಗುರುವಾರ ಹುಂಡಿ ಎಣಿಕೆ ನಡೆಸಲಾಯಿತು. ಈ ವೇಳೆ ಹುಂಡಿಯಲ್ಲಿ 2.50 ಕೋಟಿ ರೂಪಾಯಿಗು ಹೆಚ್ಚು ಹಣ ಸಂಗ್ರಹವಾಗಿದೆ.

ತಡರಾತ್ರಿವರೆಗೂ ನಡೆದ ಹುಂಡಿ ಎಣಿಕೆ ನಡೆದಿದ್ದು, 2,50,85,794 ರೂಪಾಯಿ ನಗದು, 122 ಗ್ರಾಂ ಚಿನ್ನ, 2.71 ಕೆ.ಜಿ ಬೆಳ್ಳಿ ಸಂಗ್ರಹವಾಗಿದೆ. ಕಳೆದ 36 ದಿನಗಳ ಅವಧಿಯಲ್ಲಿ ಭಕ್ತರು ಸಲ್ಲಿಸಿದ ಕಾಣಿಕೆ ಇದಾಗಿದ್ದು, 14 ಲಕ್ಷ ರೂಪಾಯಿಗೂ ಹೆಚ್ಚು ಹಣ ನಾಣ್ಯದ ರೂಪದಲ್ಲಿ ಕಾಣಿಕೆಯನ್ನು ಭಕ್ತರು ಸಲ್ಲಿಸಿದ್ದಾರೆ. 

ಇತ್ತೀಚೆಗಷ್ಟೇ ಮಹದೇಶ್ವರ ಬೆಟ್ಟ ಕ್ಷೇತ್ರಾಭಿವೃದ್ಧಿ ಪ್ರಾಧಿಕಾರ ಹಾಗು ಎಸ್ಬಿಐ ಸಹಯೋಗದಲ್ಲಿ ಮಾದಪ್ಪನ ಸನ್ನಿಧಿಯಲ್ಲಿ ಇ- ಹುಂಡಿ ಸ್ಥಾಪಿಸಿದೆ. ಭಕ್ತರು ಕ್ಯೂಆರ್ ಕೋಡ್ ಬಳಕೆ ಮಾಡಿ ದೇವರಿಗೆ ಕಾಣಿಕೆ ಅರ್ಪಿಸಬಹುದಾಗಿದೆ. 


 




ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ