ಬಿಬಿಎಂಪಿ ಯ ನೂರಾರು ಕಾರ್ಮಿಕರಲ್ಲಿ ಕೆಲಸ ಕಳೆದುಕೊಳ್ಳುವ ಭೀತಿ

ಮಂಗಳವಾರ, 22 ಮಾರ್ಚ್ 2022 (18:24 IST)
ಬಿಬಿಎಂಪಿ ವ್ಯಾಪ್ತಿಯಲ್ಲಿ ಇಂದಿರಾ ಕ್ಯಾಂಟೀನ್‌ಗಳನ್ನು ನಿರ್ವಹಣೆ ಮಾಡುತ್ತಿರುವ ಗುತ್ತಿಗೆ ಸಂಸ್ಥೆಗಳಿಗೆ ಕೋಟ್ಯಾಂತರ ರೂಪಾಯಿ ಬಿಲ್‌ ಪಾವತಿ ಬಾಕಿ‌ ಉಳಿದಿದ್ದು, ನೂರಾರು ಕಾರ್ಮಿಕರು ಕೆಲಸ ಕಳೆದುಕೊಳ್ಳುವ ಭೀತಿ ಎದುರಾಗಿದೆ.ಇಂದಿರಾ ಕ್ಯಾಂಟೀನ್‌ಗಳಲ್ಲಿ ಕಡು ಬಡವರು, ಕೂಲಿ ಕಾರ್ಮಿಕರು, ವ್ಯಾಪಾರಿಗಳು, ಆಟೊ, ಟ್ಯಾಕ್ಸಿ ಚಾಲಕರಿಗೆ ರಿಯಾಯಿತಿ ದರದಲ್ಲಿ ಮೂರು ಹೊತ್ತು ಊಟ, ತಿಂಡಿ ನೀಡಲಾಗುತ್ತಿದೆ. ಈ ಕ್ಯಾಂಟೀನ್‌ಗಳನ್ನು ನಿರ್ವಹಣೆ ಮಾಡುತ್ತಿರುವ ಗುತ್ತಿಗೆದಾರರಿಗೆ ಕಳೆದ ಹತ್ತು ತಿಂಗಳಿನಿಂದ 35 ಕೋಟಿ ರೂ. ಬಾಕಿ ಉಳಿಸಿಕೊಳ್ಳಲಾಗಿದೆ. ಕೋಟ್ಯಂತರ ರೂ. ಬಾಕಿ ಉಳಿಸಿಕೊಂಡಿರುವ ಹಿನ್ನೆಲೆಯಲ್ಲಿ ಕ್ಯಾಂಟೀನ್‌ಗಳನ್ನು ಮುಚ್ಚಲು ಗುತ್ತಿಗೆ ಸಂಸ್ಥೆಗಳು ಚಿಂತನೆ ನಡೆಸಿವೆ. ಇದರಿಂದ ನೂರಾರು ಅಡುಗೆ ಸಿಬ್ಬಂದಿ, ಕಾರ್ಮಿಕರು ಕೆಲಸ ಕಳೆದುಕೊಳ್ಳುವ ಭೀತಿ ಎದುರಾಗಿದೆ.ಈ ಕುರಿತು ಪ್ರತಿಕ್ರಿಯಿಸಿದ ಗುತ್ತಿಗೆದಾರರೊಬ್ಬರು, ಸಂಸ್ಥೆಗೆ 10 ತಿಂಗಳಿನಿಂದ 22 ಕೋಟಿ ರೂ. ಹಣ ಬರಬೇಕಿದೆ. ಅಲ್ಲದೇ ಕಳೆದ ವರ್ಷದ ಪೌರಕಾರ್ಮಿಕರ ನಾಲ್ಕು ಕೋಟಿ ರೂ. ಬಿಲ್ ಬಾಕಿ ಇದೆ. ಹೀಗೆ, ಬಿಲ್ ಪಾವತಿ ಮಾಡದಿದ್ದರೆ ಬಾಗಿಲು ಮುಚ್ಚಬೇಕಾಗುತ್ತದೆ ಎಂದರು. ಕೊರೋನಾ ಭೀತಿಯಿಂದಾಗಿ ಹಲವು ಕ್ಯಾಂಟೀನ್‌ಗಳತ್ತ ಜನ ಸುಳಿಯುತ್ತಿಲ್ಲ.  ಹೀಗಾಗಿ, ಹಲವು ಕ್ಯಾಂಟೀನ್‌ಗಳು ಗ್ರಾಹಕರಿಲ್ಲದೆ ಭಣಗುಡುತ್ತಿವೆ. ಪಾಲಿಕೆಯಿಂದ ಬಿಲ್‌ ಪಾವತಿಯಾಗದ ಹಿನ್ನೆಲೆಯಲ್ಲಿ ಗುತ್ತಿಗೆ ಸಂಸ್ಥೆಗಳು ದಿನಸಿ, ತರಕಾರಿ ಪೂರೈಸುತ್ತಿದ್ದವರಿಗೆ ಲಕ್ಷಾಂತರ ರೂ. ಬಾಕಿ ಉಳಿಸಿಕೊಂಡಿವೆ.ಅದೇ ರೀತಿ, ನೀರು, ಒಳಚರಂಡಿ ಸಂಪರ್ಕ ಕಡಿತ ಗುತ್ತಿಗೆ ಸಂಸ್ಥೆಗಳು ಜಲಮಂಡಳಿಗೆ ಕೋಟ್ಯಂತರ ರೂ. ಶುಲ್ಕ ಬಾಕಿ ಉಳಿಸಿಕೊಂಡಿವೆ. ಹಾಗಾಗಿ, ಜಲಮಂಡಳಿಯು ಅಡುಗೆ ಮನೆ ಹಾಗೂ ಕ್ಯಾಂಟೀನ್‌ಗಳಿಗೆ ನೀರು, ಒಳಚರಂಡಿ ಸಂಪರ್ಕವನ್ನು ಕಡಿತಗೊಳಿಸಿದೆ. ಹೀಗೆ ಅದ್ರೆ ಕ್ಯಾಂಟೀನ್ ಮುಚ್ಚಬೇಕಗುತ್ತೆ ಅಂತ ಗುತ್ತಿಗೆದಾರ ತಮ್ಮ ಅಳಲು ತೊಡಿಕೊಂಡಿದಾರೆ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ